ಬದಿಯಡ್ಕ: ಪಳ್ಳತ್ತಡ್ಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಕಂಪ್ಯೂಟರ್ ಲ್ಯಾಬ್ ನ್ನು ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು ಅವರು ಮಂಗಳವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಶಾಲೆಯ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳು ಸದಾ ನಡೆಯುತ್ತಿರಬೇಕು ಎಂದು ತಿಳಿಸಿ, ಮಕ್ಕಳ ಉಪಯೋಗಕ್ಕಾಗಿ ಎರಡು ಕಂಪ್ಯೂಟರ್‍ಗಳನ್ನು ಶಾಸಕರ ನಿಧಿಯಿಂದ ನೀಡುವ ಭರವಸೆಯನ್ನು ನೀಡಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಹಮೀದ್ ಪಳ್ಳತ್ತಡ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸದಸ್ಯರುಗಳಾದ ಪ್ರಸನ್ನ, ಲಕ್ಷ್ಮೀನಾರಾಯಣ ಪೈ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಯತೀಶ್ ಕುಮಾರ್ ರೈ, ಮಾತೃಸಂಘದ ಲೀಲಾವತಿ, ವ್ಯವಸ್ಥಾಪಕ ಮಂಡಳಿಯ ಶ್ಯಾಮಲಾ ಎಸ್.ಎನ್.ಭಟ್ ಶುಭಾಶಂಸನೆಗೈದರು. ಶಾಲಾ ಮುಖ್ಯೋಪಾಧ್ಯಾಯ ಮಣಿ ಎಂ.ಎಂ. ಸ್ವಾಗತಿಸಿ, ನೌಕರ ಸಂಘದ ಕಾರ್ಯದರ್ಶಿ ಲತಾ ಎನ್. ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ಹಾಡಿದರು. ಅಧ್ಯಾಪಕ ವೃಂದ, ಶಾಲಾ ಪಾಲಕರು, ಹಿತೈಷಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.