ಬದಿಯಡ್ಕ: ಪೆರಾಜೆ ಮಾಣಿ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಶ್ರೀರಾಮ ಸಾಮ್ರಾಜ್ಯ ಪಟ್ಟಾಭಿಷೇಕ ಕಾರ್ಯಕ್ರಮದ ರಾಜೋಪಚಾರ ಸೇವೆಯ ಸಂದರ್ಭದಲ್ಲಿ ಪುತ್ತೂರು ವೈಷ್ಣವೀ ನಾಟ್ಯಾಲಯದ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಅವರ ಶಿಷ್ಯೆ ವಿದುಷಿ ಸ್ನೇಹ ಚೂಂತಾರು ಅವರಿಂದ ಭರತನಾಟ್ಯ ಸೇವೆ ಜರಗಿತು. ಹಿಮ್ಮೇಳದಲ್ಲಿ ನಟುವಾಂಗದಲ್ಲಿ ವಿದುಷಿ ಯೋಗೀಶ್ವರೀ ಜಯಪ್ರಕಾಶ್, ಹಾಡುಗಾರಿಕೆಯಲ್ಲಿ ರಾಜ್ಯ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ವಿದ್ವಾನ್ ವೆಳ್ಳಿಕೋತ್ ವಿಷ್ಣು ಭಟ್, ಮೃದಂಗದಲ್ಲಿ ವಿದ್ವಾನ್ ಗೀತೇಶ್ ಕುಮಾರ್ ನೀಲೇಶ್ವರ ತಮ್ಮ ಸೇವೆಯನ್ನು ನೀಡಿದರು. ಕಾರ್ಯಕ್ರಮದ ಬಳಿಕ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳು ತಂಡದ ಸೇವೆಗೆ ಮೆಚ್ಚುಗೆಯನ್ನು ಸೂಚಿಸಿ ಆಶೀರ್ವಾದ ಮಂತ್ರಾಕ್ಷತೆಯನ್ನಿತ್ತು ಹರಸಿದರು. ಕಾರ್ಯಕ್ರಮದಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ವಿವಿಧೆಡೆಗಳಿಂದ ಶ್ರೀಮಠದ ಶಿಷ್ಯವೃಂದದವರು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.
ಶ್ರೀರಾಮ ಸಾಮ್ರಾಜ್ಯ ಪಟ್ಟಾಭಿಷೇಕ ಸಂದರ್ಭ ಭರತನಾಟ್ಯ ಸೇವೆ
0
ಫೆಬ್ರವರಿ 19, 2020