ಕಾಸರಗೋಡು: ರಾಜ್ಯದಲ್ಲಿ ಅಕ್ರಮವಾಗಿ ಫ್ಲೆಕ್ಸ್ ಬೋರ್ಡ್ ಯಾ ಬ್ಯಾನರ್ ಇತ್ಯಾದಿಗಳನ್ನು ಅಳವಡಿಸಿದ್ದಲ್ಲಿ ಅದನ್ನು ಪತ್ತೆಹಚ್ಚಿ ಅಳವಡಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೆÇಲೀಸ್ ಇಲಾಖೆ ತೀರ್ಮಾನಿಸಿದೆ.
ಮರು ಬಳಕೆಗೆ ಸಾಧ್ಯವಾಗದ ಪ್ಲಾಸ್ಟಿಕ್ ಮತ್ತು ಫ್ಲೆಕ್ಸ್ ಸಾಮಗ್ರಿಗಳ ಬಳಕೆಗೆ ರಾಜ್ಯದಲ್ಲಿ ಈಗಾಗಲೇ ನಿಷೇಧ ಹೇರಲಾಗಿದೆ. ಅದಾಗ್ಯೂ ಕೆಲವೆಡೆಗಳಲ್ಲಿ ಬ್ಯಾನರ್, ಬೋರ್ಡ್ ಇತ್ಯಾದಿಗಳನ್ನು ಪ್ರದರ್ಶಿಸಲಾಗುತ್ತಿದೆ. ಅಂತಹ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೆÇಲೀಸ್ ಇಲಾಖೆ ತೀರ್ಮಾನಿಸಿದೆ.
ಈ ಬಗ್ಗೆ ಪೆÇಲೀಸ್ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳ ಪೆÇಲೀಸ್ ವರಿಷ್ಠ ಅಧಿಕಾರಿಗಳಿಗೆ ಸುತ್ತೋಲೆ ಜಾರಿಗೊಳಿಸಿದೆ. ಫ್ಲೆಕ್ಸ್ ಸಾಮಾಗ್ರಿಗಳನ್ನು ಬಳಸುವವರನ್ನು ಗುರುತಿಸಿ ಅವರ ವಿರುದ್ಧ ಕೇಸು ದಾಖಲಿಸುವಂತೆಯೂ ಸುತ್ತೋಲೆಯಲ್ಲಿ ನಿರ್ದೇಶ ನೀಡಲಾಗಿದೆ. ಇದಕ್ಕೆ ಹೊಂದಿಕೊಂಡು ಎಲ್ಲಾ ಪೆÇಲೀಸ್ ಠಾಣೆಗಳಲ್ಲಿ ಅಗತ್ಯದ ಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.