ನವದೆಹಲಿ: ಸರ್ಕಾರಿ ಸ್ವಾಮ್ಯದ 10 ಬ್ಯಾಂಕ್ ಗಳನ್ನು ನಾಲ್ಕು ಬ್ಯಾಂಕ್ ಗಳಾಗಿ ವಿಲೀನ ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದ್ದು, ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.
ನಿನ್ನೆ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಅಲಹಬಾದ್ ಬ್ಯಾಂಕ್, ಆಂಧ್ರ ಬ್ಯಾಂಕ್ ಮತ್ತು ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಬ್ಯಾಂಕ್ ಸೇರಿದಂತೆ 10 ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳನ್ನು ನಾಲ್ಕು ಪ್ರಮುಖ ಬ್ಯಾಂಕ್‍ಗಳಾಗಿ ಪರಿವರ್ತನೆಗೊಳ್ಳುತ್ತಿದ್ದು, ಏಪ್ರಿಲ್ 1ರಿಂದ ಕಾರ್ಯಾಚರಿಸಲಿವೆ ಎಂದು ತಿಳಿಸಿದರು. ಈಗಾಗಲೇ ಪ್ರಕಟ ಮಾಡಲಾಗಿರುವ ವಿಲೀನ ಪ್ರಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆಯಲ್ಲಿ ಸಮ್ಮತಿ ಸಿಕ್ಕಿದೆ. ಅದರಲ್ಲಿ ಯಾವುದೇ ಕಾನೂನಾತ್ಮಕ ತೊಡಕುಗಳಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬ್ಯಾಂಕುಗಳ ವಿಲೀನದ ಬಗ್ಗೆ ಈಗಾಗಲೇ ಆಯಾ ಬ್ಯಾಂಕುಗಳ ನಿರ್ದೇಶಕರು ನಿರ್ಧಾರವನ್ನು ತೆಗೆದುಕೊಂಡಾಗಿದೆ. ಜಾಗತಿಕ ಬ್ಯಾಂಕುಗಳನ್ನು ಮಾಡುವ ಉದ್ದೇಶದಿಂದ ಈ ವಿಲೀನ ಪ್ರಕ್ರಿಯೆಗಳನ್ನು ಮಾಡಲಾಗುತ್ತಿದೆ ಎಂದರು.