ಮುಳ್ಳೇರಿಯ : ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಅಂಗಸಂಸ್ಥೆಯಾದ ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಆಶ್ರಯದಲ್ಲಿ ಮಾ.8ರಂದು ಬೆಳಗ್ಗೆ 8ರಿಂದ ಆದೂರು ಮಲ್ಲಾವರ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥವಾಗಿ "ಧನ್ವಂತರಿ ಹೋಮ' ನಡೆಯಲಿದೆ. ಈ ಸಂದರ್ಭದಲ್ಲಿ ಬೆಳಗ್ಗೆ 10ರಿಂದ ಅಡೂರಿನ ಶ್ರೀಪ್ರಿಯಾ ಮಹಿಳಾ ಭಜನಾ ಮಂಡಳಿ ಹಾಗೂ ಬೆಳಗ್ಗೆ 10.30ರಿಂದ ಮುಳ್ಳೇರಿಯದ ಹರಿಪ್ರಿಯ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 11ರಿಂದ ಕಾಂತಮಂಗಲ ರಾಘವೇಂದ್ರ ಮಠದ ಟ್ರಸ್ಟಿ ಮುಳ್ಯ ನಡುಮನೆ ಶ್ರೀಕೃಷ್ಣ ಸೋಮಯಾಗಿ ಅವರಿಂದ 'ಸಂಘಟನೆಯ ಬಲವರ್ಧನೆ' ಎಂಬ ವಿಚಾರದಲ್ಲಿ ಉಪನ್ಯಾಸ ನಡೆಯಲಿದೆ. ನಂತರ ಸಮುದಾಯದ ಮಕ್ಕಳಿಂದ ಗಾಯನ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಹೋಮದ ಪೂರ್ಣಾಹುತಿ, ಮಹಾಪೂಜೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಅಧ್ಯಕ್ಷೆ ಸತ್ಯಪ್ರೇಮಾ ಭಾರಿತ್ತಾಯ, ಮುಳ್ಳೇರಿಯ ವಲಯ ಅಧ್ಯಕ್ಷ ವೆಂಕಟಕೃಷ್ಣ ಕಾರಂತ ಮೊದಲಾದವರು ಭಾಗವಹಿಸಲಿದ್ದಾರೆ.
ಶಿವಳ್ಳಿ ಮಾಸಿಕ ಸಭೆ ಮಾ.7ರಂದು : ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಮಾಸಿಕ ಸಭೆಯು ಮಾ.7ರಂದು ಬೆಳಗ್ಗೆ 10ರಿಂದ ಅಡೂರು ಮಹಾಲಿಂಗೇಶ್ವರ ಕ್ಷೇತ್ರದ ಪರಿಸರದಲ್ಲಿ ನಡೆಯಲಿದೆ. ಅದೇ ರೀತಿ ಅಡೂರು ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಮಾ.6ರಂದು ಸಂಜೆ 6.30ರಿಂದ ಸಂಘಟನೆಯ ಸದಸ್ಯರಿಂದ ವಿಷ್ಣು ಸಹಸ್ರನಾಮ ಪಾರಾಯಣ ಜರಗಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಸಂಘಟನೆಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆ ತಿಳಿಸಿದೆ.