ಸಮರಸ ಚಿತ್ರ ಸುದ್ದಿ: ಬದಿಯಡ್ಕ:, ಪೆರಡಾಲ ಶ್ರೀ ಉದನೇಶ್ವರ ಭಜನಾ ಸಂಘದ ನೇತೃತ್ವದಲ್ಲಿ ಮಹಾಶಿವರಾತ್ರಿಯ ದಿನ ಪೆರಡಾಲ ಶ್ರೀ ಉದನೇಶ್ವರ ದೇವರ ಸನ್ನಿಧಿಯಲ್ಲಿ ಸೂರ್ಯೋದಯದಿಂದ ಸೂರ್ಯಾಸ್ತದ ತನಕ ನಡೆದ ಏಕಾಹ ಭಜನೆಯ ನಂತರ ರಾತ್ರಿ ಶ್ರೀಮಧ್ವಾಧೀಶ ವಿಠಲ ದಾಸ ನಾಮಾಂಕಿತ ರಾಮಕೃಷ್ಣ ಕಾಟುಕುಕ್ಕೆ ಅವರು ಶ್ರೀಕೃಷ್ಣ ಗಾನಾಮೃತ ಕಾರ್ಯಕ್ರಮ ನಡೆಸಿಕೊಟ್ಟರು.