ಮಂಜೇಶ್ವರ: ತೊಟ್ಟೆತ್ತೋಡಿ ವಾಣೀವಿಲಾಸ ಕಿರಿಯ ಪ್ರಾಥಮಿಕ ಶಾಲಾ ರ್ವಾಕೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು.
ಮೀಯಪದವು ಎಸ್.ವಿ.ವಿ.ಹೆಚ್.ಎಸ್. ಶಾಲಾ ಪ್ರಬಂಧಕಿ ಟಿ.ಪ್ರೇಮಾ ಕೆ.ಭಟ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿರಸಿಯ ದಂತ ವೈದ್ಯ ಡಾ.ಟಿ.ನಾರಾಯಣ ಭಟ್, ಯಕ್ಷಗಾನ ಅಕಾಡೆಮಿ ಸದಸ್ಯ, ಲೇಖಕ ಯೋಗೀಶ್ ರಾವ್ ಚಿಗುರುಪಾದೆ, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ. ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯರಾಗಿರುವ ಯೋಗೀಶ್ ರಾವ್ ಚಿಗುರುಪಾದೆ ಅವರನ್ನು ಶಾಲು ಹೊದಿಸಿ ಸಮ್ಮಾನಿಸಲಾಯಿತು.
ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ. ಮಾತನಾಡಿ ಶೈಕ್ಷಣಿಕ ಕ್ಷೇತ್ರದಲ್ಲುಂಟಾದ ಬದಲಾವಣೆಗಳ ಬಗ್ಗೆ ತಿಳಿಸಿ ಶಾಲೆಯ ಬಗ್ಗೆ ಅಭಿಮಾನ ವ್ಯಕ್ತಪಡಿಸಿದರು. ಶಾಲಾ ಹಿತೈಷಿಯಾಗಿರುವ ಡಾ. ಟಿ.ನಾರಾಯಣ ಭಟ್ ಅವರು ಪ್ರಸ್ತುತ ಸಮಾಜ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಮಾತನಾಡಿ ಹಾಗೂ ವಿದ್ಯಾನಿಧಿ ಯೋಜನೆಗೆ 15 ಸಾವಿರ ರೂ.ವನ್ನಿತ್ತು ಸಹಕರಿಸಿದರು. ಈ ವರ್ಷ ವೃತ್ತಿಜೀವನದಿಂದ ನಿವೃತ್ತಿ ಹೊಂದುತ್ತಿರುವ ನೀರಜಾಕ್ಷಿ ಟಿ.ಕೆ. ಅವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ಸ್ಕೂಲ್ ಸಪೆÇೀರ್ಟಿಂಗ್ ಗ್ರೂಪ್ ಅಧ್ಯಕ್ಷರಾದ ಟಿ.ಡಿ.ಸದಾಶಿವ ರಾವ್, ಮಮ್ಮುಂಞÂ ಹಾಜಿ ಚಿನಾಲ, ಉದಯಕುಮಾರ್ ಟಿ.ಆರ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್, ಮಾತೃ ಮಂಡಳಿ ಅಧ್ಯಕ್ಷೆ ದೇವಕಿ ಹಾಗು ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ವಸಂತ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ರಾಜೇಶ್ವರಿ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲಾ ಪ್ರಬಂಧಕ ಡಾ.ಜಯಪ್ರಕಾಶ ನಾರಾಯಣ ಸ್ವಾಗತಿಸಿದರು. ಶಾಲಾ ಹಳೆ ವಿದ್ಯಾರ್ಥಿ ಲಕ್ಷ್ಮೀಶ ಕಾರ್ಯಕ್ರಮ ನಿರೂಪಿಸಿದರು.