ಬದಿಯಡ್ಕ: ಕನ್ನಡ ಮಾಧ್ಯಮ ಶಾಲೆಗಳನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕೊಡಮಾಡುವ 2020ನೇ ಸಾಲಿನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಶಸ್ತಿಪ್ರಧಾನ ಸಮಾರಂಭವು ಮಂಗಳೂರು ದೇರಳೆಕಟ್ಟೆ ಕೆ.ಎಸ್.ಹೆಗ್ಡೆ ಸಭಾಂಗಣದಲ್ಲಿ ಮಂಗಳವಾರ ಜರಗಿದ್ದು, ಪೆರಡಾಲ ನವಜೀವನ ಶಾಲೆಗೆ ಶ್ರೇಷ್ಠ ಶಾಲೆ 2020 ಪ್ರಶಸ್ತಿಯನ್ನು ನೀಡಲಾಗಿದೆ.
ಶಾಲಾ ಅಧಿಕೃತರಿಗೆ ಪ್ರಶಸ್ತಿ ಪತ್ರ ಹಾಗೂ 3 ಲಕ್ಷ ರೂಪಾಯಿಯನ್ನು ಸಮಾರಂಭದಲ್ಲಿ ಹಸ್ತಾಂತರಿಸಲಾಯಿತು. 2019-20ರ ಸಾಲಿನ ಪ್ರಶಸ್ತಿ ಆಯ್ಕೆಗಾಗಿ ದಕ್ಷಿಣ ಕನ್ನಡ ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಅರ್ಹ ಶಾಲೆಗಳಿಗೆ ತೆರಳಿ ಮೌಲ್ಯ ಮಾಪನ ಮಾಡಲಾಗಿತ್ತು.
ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್‍ನ ಪೆÇ್ರ. ಚಾನ್ಸೆಲರ್ ಡಾ. ಎಚ್.ಎಸ್.ಬಲ್ಲಾಳ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆ ಹಾಗೂ ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪೆÇ್ರ. ಡಾ.ಎಂ. ಶಾಂತಾರಾಮ ಶೆಟ್ಟಿ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ ಆಳ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಿಟ್ಟೆ ವಿವಿಯ ಕುಲಸಚಿವ ಡಾ. ಅಲಕಾ ಕುಲಕರ್ಣಿ, ಆರ್ಥಿಕ ನಿರ್ದೇಶಕ ರಾಜೇಂದ್ರ ಪ್ರಶಸ್ತಿ ಘೋಷಣೆ ಮಾಡಿದರು. ಡಾ. ಸಾಯಿಗೀತಾ ನಿರೂಪಿಸಿದರು. ನಿಟ್ಟೆ ವಿದ್ಯಾಸಂಸ್ಥೆಯ ಟ್ರಸ್ಟಿ ವಿಶಾಲ್ ಹೆಗ್ಡೆ ಸ್ವಾಗತಿಸಿ, ನಿಟ್ಟೆ ವಿವಿಯ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ವಂದಿಸಿದರು. ನವಜೀವನ ಶಾಲಾ ವ್ಯವಸ್ಥಾಪಕ ಮಂಡಳಿಯ ಸದಸ್ಯರುಗಳಾದ ನಿವೃತ್ತ ಪ್ರಾಂಶುಪಾಲ ಮೈರ್ಕಳ ನಾರಾಯಣ ಭಟ್, ಕೃಷ್ಣ ಪ್ರಸಾದ ರೈ ಪೆರಡಾಲ, ಅಧ್ಯಾಪಕರುಗಳಾದ ಹರೀಶ್ ಐ., ಕೇಶವ ಭಟ್, ಸರ್ವಮಂಗಳ, ಪ್ರಭಾವತಿ ಕೆದಿಲಾಯ ಪುಂಡೂರು, ವಿದ್ಯಾ, ರಾಜೇಶ್ ಅಗಲ್ಪಾಡಿ, ನಿರಂಜನ ರೈ ಪೆರಡಾಲ, ನಾರಾಯಣ ಮುರಿಯಂಕೂಡ್ಲು ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.