ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ(ಸೋಮವಾರ) ಮತ್ತೆ 1463 ಹೊಸ ವೈರಸ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 28,380ಕ್ಕೇರಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1463 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 28,380ಕ್ಕೇರಿದೆ. ಈ ಪೈಕಿ 6362 ಮಂದಿ ಸೋಂಕಿತರು ಗುಣಮುಖರಾಗಿದ್ದು, 886 ಸೋಂಕಿತರು ಸಾವನ್ನಪ್ಪಿದ್ದಾರೆ. 21132 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 381 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಿದೆ.
ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, ಇಲ್ಲಿ ಈ ವರೆಗೂ ಸೋಂಕಿತರ ಸಂಖ್ಯೆ 8068ಕ್ಕೆ ಏರಿಕೆಯಾಗಿದೆ. ಅಂತೆಯೇ 342 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಈ ವರೆಗೂ 1076 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 2918ಕ್ಕೆ ಏರಿಕೆಯಾಗಿದ್ದು, 54 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 877 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಗುಜರಾತ್ ನಲ್ಲಿ ಸೋಂಕಿತರ ಸಂಖ್ಯೆ 3301ಕ್ಕೆ ಏರಿಕೆಯಾಗಿದ್ದು, 151 ಮಂದಿ ಸಾವನ್ನಪ್ಪಿದ್ದಾರೆ. ಅಂತೆಯೇ 313ಸ ಮಂದಿ ಗುಣಮುಖರಾಗಿದ್ದಾರೆ.