ವಾಷಿಂಗ್ಟನ್: ವಿಶ್ವದೆಲ್ಲೆಡೆ ಕೊರೋನಾ ವೈರಸ್ ಮಹಾಮಾರಿಗೆ ಈ ವರೆಗೂ 2.13 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಅಮೆರಿಕಾ ಒಂದೇ ರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 2.200 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಇದರಂತೆ ಅಮೆರಿಕಾದಲ್ಲಿ ಸಾವಿನ ಸಂಖ್ಯೆ 59,000ಕ್ಕೆ ಏರಿಕೆಯಾಗಿದ್ದು, 1 ಮಿಲಿಯನ್ ಗಿಂತಲೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ವಿಶ್ವದ ವಿವಿಧ ರಾಷ್ಟ್ರಗಳಲ್ಲಿಯೂ ಕೊರೋನಾ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ವರೆಗೂ 2.13 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 30.7 ಲಕ್ಷ ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.