ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1,718 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 33 ಸಾವಿರ ಗಡಿ ದಾಟಿದೆ. ಇನ್ನು ಒಟ್ಟಾರೆ 1,075 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 33,050ಕ್ಕೆ ಏರಿಕೆಯಾಗಿದೆ. ಇನ್ನು 630 ಗುಣಮುಖರಾಗಿದ್ದು ಒಟ್ಟಾರೆ 8,324 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ಹೇಳಿದ್ದಾರೆ.
ಕಳೆದ ಐದು ದಿನಗಳಲ್ಲಿ ದೇಶಾದ್ಯಂತ 49,800 ಮಂದಿಗೆ ಪರೀಕ್ಷೆ ನಡೆಸಲಾಗಿದೆ. 292 ಸರ್ಕಾರಿ ಹಾಗೂ 97 ಖಾಸಗಿ ಆಸ್ಪತ್ರೆಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದರು.