ವಾಷಿಂಗ್ಟನ್: ಅಮೆರಿಕದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 60ಕ್ಕೇರಿದೆ.
ಜಗತ್ತಿನಾದ್ಯಂತ ಕೊವಿಡ್ 19 ರೋಗದಿಂದ 2,28,019 ಮಂದಿ ಸಾವಿಗೀಡಾಗಿದ್ದಾರೆ. 30 ಲಕ್ಷದ 21 ಸಾವಿರ ಮಂದಿಗೆ ಕೊರೊನಾ ಸೋಂಕು ತಗುಲಿದೆ. ಅಮೆರಿಕದಲ್ಲಿ ಅತಿ ಹೆಚ್ಚು ಅಂದರೆ 10,64,194 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು 61,656 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಸ್ಪೇನ್‍ನಲ್ಲಿ 2,36,899, ಇಟಲಿಯಲ್ಲಿ 2,03,591 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದ್ದು, ಈ ಎರಡು ದೇಶಗಳಲ್ಲಿ ಕ್ರಮವಾಗಿ 24,275 ಮತ್ತು 27,682 ಮಂದಿ ಸಾವನ್ನಪ್ಪಿದ್ದಾರೆ.
ಈ ಸೋಂಕು ಮೊದಲು ಕಾಣಿಸಿಕೊಂಡಿದ್ದು ಚೀನಾದ ವುಹಾನ್ ನಗರದಲ್ಲಿ, ಇದುವರೆಗೆ 82,882 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 4633 ಜನರು ಮೃತಪಟ್ಟಿದ್ದಾರೆ. 77 ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.
ಪಾಕಿಸ್ತಾನದಲ್ಲಿ 15,052 ಮಂದಿ ಕೊರೊನಾ ಸೋಂಕಿತರಿದ್ದಾರೆ. ಅಲ್ಲಿ 343 ಮಂದಿ ಮೃತಪಟ್ಟಿದ್ದಾರೆ. ಫ್ರಾನ್ಸ್ ಮತ್ತು ಇಂಗ್ಲೆಂಡ್‍ನಲ್ಲಿ ತಲಾ 1 ಲಕ್ಷ 60 ಸಾವಿರಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಫ್ರಾನ್ಸ್‍ನಲ್ಲಿ 24 ಸಾವಿರ ಮತ್ತು ಇಂಗ್ಲೆಂಡ್‍ನಲ್ಲಿ 26 ಸಾವಿರಕ್ಕೂ ಹೆಚ್ಚು ಮಂದಿ ಜಾಗತಿಕ ಪಿಡುಗಿಗೆ ಬಲಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.