ಕಾಸರಗೋಡು: ಕರೋನಾ ಮಹಾಮಾರಿಯಿಂದ ವಿಶ್ವದಾದ್ಯಂತ ಜನಜೀವನ ಸಂಕಷ್ಟಕ್ಕೊಳಗಾದ ಹಿನ್ನೆಲೆಯಲ್ಲಿ ವಿದೇಶದಲ್ಲಿ ಸಿಲುಕಿರುವ ಭಾರತಿಯರನ್ನು ಸ್ವದೇಶಕ್ಕೆ ಕರೆ ತರಲು ಕೇಂದ್ರ ಹಾಗೂ ಕೇರಳ ಸರ್ಕಾರದ ವಿಳಂಬ ನೀತಿಯನ್ನು ವಿರೋಧಿಸಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮುಲ್ಲಪ್ಪಳ್ಳಿ ರಾಮಚಂದ್ರನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಸರಗೋಡು ಸಂಸದ ರಾಜಮೋಹನ ಉಣ್ಣಿತ್ತಾನ್, ಕಣ್ಣೂರು ಸಂಸದ ಕೆ.ಸುಧಾಕರನ್, ವಡಗೆರೆ ಸಂಸದ ಮುರಳೀಧರನ್ ಉಪಸ್ಥಿತರಿದ್ದರು.