ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಸಂದರ್ಭದಲ್ಲಿ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಸಂಸ್ಥೆಗಳಲ್ಲಿ ಸಂಬಳ ಕಡಿತ, ಬಲವಂತದ ರಜೆ ಮುಂತಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದರ ವಿರುದ್ಧ ಪತ್ರಕರ್ತರ ಸಂಘಗಳು ಜಂಟಿಯಾಗಿ ಸಲ್ಲಿಸಿದ್ದ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ವಿವರ ಕೇಳಿ ನೋಟಿಸ್ ಜಾರಿ ಮಾಡಿದೆ.
ಕೋವಿಡ್-19 ತಡೆಗಟ್ಟುವಿಕೆಗೆ ಲಾಕ್ ಡೌನ್ ಜಾರಿಗೊಳಿಸಿದ ನಂತರ, ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಸಂಸ್ಥೆಗಳಲ್ಲಿ ಸಂಬಳ ಕಡಿತ, ಬಲವಂತದ ರಜೆ ಮುಂತಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದರ ವಿರುದ್ಧ ಪತ್ರಕರ್ತರ ಸಂಘಗಳು ಜಂಟಿಯಾಗಿ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಆಲಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ, ಭಾರತೀಯ ದಿನಪತ್ರಿಕೆಗಳ ಸಂಘ ಐಎನ್‍ಎಸ್) ಮತ್ತು ಸುದ್ದಿ ಪ್ರಸಾರ ಮಾಧ್ಯಮಗಳ ಸಂಸ್ಥೆ(ಎನ್ ಬಿಎ) ಗೆ ನೋಟಿಸ್ ಜಾರಿ ಮಾಡಿದೆ.
ಈ ವಿಷಯ ಕೆಲ ಗಂಭೀರ ಸಮಸ್ಯೆಗಳನ್ನು ಹುಟ್ಟುಹಾಕಿರುವುದರಿಂದ, ಇದರ ಪರಿಗಣನೆ ಅಗತ್ಯವಾಗಿದೆ ಎಂದು ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಸುಪ್ರೀಂಕೋರ್ಟ್ ನ ಮೂವರು ನ್ಯಾಯಮೂರ್ತಿಗಳ ಪೀಠ ಹೇಳಿದೆ. ಕೇಂದ್ರ ಸರ್ಕಾರ, ಎನ್ ಬಿ ಎ ಮತ್ತು ಐ ಎಸ್ ಎಸ್ ಗಳಿಗೆ ನೋಟಿಸ್ ನೀಡುತ್ತೇವೆ. ಮಾಧ್ಯಮ ಸಂಸ್ಥೆಗಳು ಸಲ್ಲಿಸಿರುವ ಜಂಟಿ ಮನವಿಗಳ ಕುರಿತು ಈ ಸಂಸ್ಥೆಗಳಿಂದ ವಿವರವಾದ ಪ್ರತಿಕ್ರಿಯೆ ಪಡೆಯುತ್ತೇವೆ ಎಂದು ನ್ಯಾಯಾಲಯ ಹೇಳಿದೆ.
ಲಾಕ್ ಡೌನ್ ಜಾರಿಗೊಳಿಸಿದ ನಂತರ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಸಂಸ್ಥೆಗಳಲ್ಲಿ ಸಂಬಳ ಕಡಿತ, ಬಲವಂತದ ರಜೆ ಮುಂತಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದರ ವಿರುದ್ಧ ಪತ್ರಕರ್ತರ ರಾಷ್ಟ್ರೀಯ ಮೈತ್ರಿಕೂಟ(ಎನ್ ಎ ಜೆ) ಮತ್ತು ದೆಹಲಿ ಪತ್ರಕರ್ತರ ಸಂಘ (ಡಿಯುಜೆ) ಮತ್ತು ಬೃಹನ್ ಮುಂಬೈ ಪತ್ರಕರ್ತರ ಸಂಘ (ಬಿಎಂಯುಜೆ) ಸುಪ್ರೀಂ ಕೋರ್ಟ್‍ಗೆ ಮೊರೆ ಹೋಗಿದ್ದವು. ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಮಾಧ್ಯಮ ನೌಕರರನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಮತ್ತು ಇತರ ಸಂಬಂಧಪಟ್ಟ ಸಂಸ್ಥೆಗಳಿಗೆ ಸೂಚನೆ ನೀಡಬೇಕೆಂದು ನ್ಯಾಯಾಲಯಕ್ಕೆ ಅರ್ಜಿದಾರರು ಮನವಿ ಮಾಡಿದ್ದರು.
ಸಂಬಂಧಿಸಿದ ಪ್ರತಿವಾದಿಗಳಿಗೆ ನೋಟಿಸ್ ನೀಡಿದ ನ್ಯಾಯಾಲಯ, ಎರಡು ವಾರಗಳ ನಂತರ ಹೆಚ್ಚಿನ ವಿಚಾರಣೆಗೆ ವಿಷಯ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.