ಮುಂಬೈ: ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ಒಂದೇ ದಿನ 583 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 583 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 10, 490ಕ್ಕೆ ಏರಿಕೆಯಾಗಿದೆ. ಜೊತೆಗೆ ನಿನ್ನೆ ಮತ್ತೆ 20 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇಲ್ಲಿ ಸಾವಿನ ಸಂಖ್ಯೆ 450ರ ಗಡಿ ದಾಟಿದೆ. ಇನ್ನು ವಾಣಿಜ್ಯ ನಗರಿ ಮುಂಬೈವೊಂದರಲ್ಲೇ 7,061 ಸೋಂಕಿತರಿದ್ದು, 290 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ನಗರಗಳ ಪಟ್ಟಿಯಲ್ಲಿ ಮುಂಬೈ ಅಗ್ರ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಪುಣೆ ಇದ್ದು, ಇಲ್ಲಿ ಸೋಂಕಿತರ ಸಂಖ್ಯೆ 1,379ಕ್ಕೆ ಏರಿಕೆಯಾಗಿ, 80 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಾದ್ಯಂತ ಇಂದು 180 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು, ಆ ಮೂಲಕ ರಾಜ್ಯದಲ್ಲಿ ಈ ವರೆಗೂ 1,773 ಸೋಂಕಿತರು ಗುಣಮುಖರಾಗಿದ್ದಾರೆ.
733 ಕಂಟೈನ್ ಮೆಂಟ್ ಝೋನ್:
ದೇಶದ ಒಟ್ಟಾರೆ ರಾಜ್ಯಗಳ ಪೈಕಿ ಮಹಾರಾಷ್ಟ್ರದಲ್ಲಿ ಗರಿಷ್ಠ ಅಂದರೆ 733 ಸಕ್ರಿಯ ಕಂಟೈನ್ ಮೆಂಟ್ ಝೋನ್ ಗಳಿವೆ. ಇಲ್ಲಿ ಗರಿಷ್ಠ 10,092 ವಿಚಕ್ಷಣಾ ದಳಗಳನ್ನು ನಿಯೋಜಿಸಲಾಗಿದೆ.