ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ ಮೂರು ದಿನಗಳಿಂದ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಭಾನುವಾರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3 ಸಾವಿರದ ಗಡಿ ದಾಟಿದೆ. ನಿನ್ನೆ ಒಂದೇ ದಿನ 266 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಚೆನ್ನೈವೊಂದರಲ್ಲಿಯೇ ಬರೊಬ್ಬರಿ 203 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಚೆನ್ನೈನಲ್ಲಿ ಸೋಂಕಿತರ ಸಂಖ್ಯೆ 1,458ಕ್ಕೆ ಏರಿಕೆಯಾಗಿದೆ.
ಈ ಮಧ್ಯೆ ದೇಶಾದ್ಯಂತ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 40 ಸಾವಿರ ಗಡಿ ದಾಟಿದ್ದು, ಭಾನುವಾರ ಒಂದೇ ದಿನ 2487 ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಯಲ್ಲಿ 83 ಮಂದಿ ಕೊವಿಡ್-19ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 1306ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.