ನವದೆಹಲಿ: ಯುಎಇಯಲ್ಲಿ ಸಿಲುಕಿರುವ ಭಾರತೀಯರು ಮರಳಿ ಸ್ವದೇಶಕ್ಕೆ ವಾಪಸ್ಸಾಗಲು ಇಚ್ಛಿಸುವ ಮಂದಿಗೆ ಅಲ್ಲಿನ ರಾಯಭಾರಿ ಕಚೇರಿ ಆನ್ ಲೈನ್ ನೋಂದಣಿ ಪ್ರಾರಂಭಿಸಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಯುಎಇಯಲ್ಲಿ ಹಲವು ಭಾರತೀಯರು ಸಿಲುಕಿದ್ದು, ವಾಪಸ್ ಆಗಮಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಯಭಾರಿ ಕಚೆರಿ ಅಧಿಕಾರಿಗಳು ವಾಪಸ್ಸಾಗಲು ಇಚ್ಛಿಸುತ್ತಿರುವ ಭಾರತೀಯರಿಗೆ ಆನ್ ಲೈನ್ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿದೆ.
www.indianembassyuae.gov.in or Consulate www.cgidubai.gov.in ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ರಾಯಭಾರಿ ಕಚೇರಿ ಟ್ವೀಟ್ ಮಾಡಿದೆ.
ಮೇ.03 ವರೆಗೆ ಲಾಕ್ ಡೌನ್ ಘೋಷಣೆ ಮಾಡಿರುವ ಭಾರತ ಸರ್ಕಾರ ದೇಶದ ಒಳಗೆ ಹಾಗೂ ವಿದೇಶಗಳ ಸಂಚಾರಕ್ಕೆ ನಿಬರ್ಂಧ ವಿಧಿಸಿದೆ. ಈ ನಡುವೆ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ರಕ್ಷಣಾ ಪಡೆಗಳ ಮುಖ್ಯಸ್ಥ, ಸೇನೆ, ವಾಯುಪಡೆ, ನೌಕಾಪಡೆಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಸೂಚನೆ ನೀಡಲಾಗಿತ್ತು.
ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಸ್ವದೇಶಕ್ಕೆ ಮರಳಲು ಬಯಸುತ್ತಿರುವ ಭಾರತೀಯರು ಒಂದೇ ಕುಟುಂಬದವರಾಗಿದ್ದರೂ ಪ್ರತ್ಯೇಕವಾಗಿ ನೋಂದಣಿ ಮಾಡಿಕೊಳ್ಳಬೇಕಿದೆ.