ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಭಾರತೀಯ ಗಡಿ ಭದ್ರತಾ ಪಡೆ(ಬಿಎಸ್ ಎಫ್)ಯ ಸಿಬ್ಬಂದಿಯನ್ನು ತೀವ್ರವಾಗಿ ಕಾಡುತ್ತಿದ್ದು, ಮತ್ತೆ 25 ಯೋಧರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತ ಬಿಎಸ್ ಎಫ್ ಯೋಧರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.
ದೆಹಲಿಯ ಜಾಮಾ ಮಸೀದಿ ಮತ್ತು ಚಾಂದಿನಿ ಮಹಲ್ ಪ್ರದೇಶದಲ್ಲಿ ನಿಯೋಜಿಸಲಾಗಿದ್ದ 126ನೇ ಬಟಾಲಿಯನ್ ಗೆ ಸೇರಿದೆ 25 ಬಿಎಸ್ ಎಫ್ ಯೋಧರಿಗೆ ನಿನ್ನೆ ಪಾಸಿಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಬಿಎಸ್ ಎಫ್ ನ ಆರು ಯೋಧರಿಗೆ ಪಾಸಿಟಿವ್ ಬಂದಿತ್ತು. ಇಂದು ಮತ್ತೆ 25 ಯೋಧರಿಗೆ ಸೋಂಕು ಪತ್ತೆಯಾಗಿದೆ ಎಂದು ಬಿಎಸ್ ಎಫ್ ವಕ್ತಾರರು ತಿಳಿಸಿದ್ದಾರೆ.
ಇದುವರೆಗೆ ಒಟ್ಟು 42 ಬಿಎಸ್ ಎಫ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನು ಐವರ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ಹೇಳಿದ್ದಾರೆ.