ಲಂಡನ್: ವಿಶ್ವದೆಲ್ಲೆಡೆ ಕೊರೋನಾ ರಣಕೇಕೆ ಹಾಕುತ್ತಿದ್ದು, 35, 00,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 2,46,000 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ವಿಶ್ವದ ಒಟ್ಟು 212 ರಾಷ್ಟ್ರಗಳಲ್ಲಿ ಮಹಾಮಾರಿ ವೈರಸ್ ತಟ್ಟಿದ್ದು, ಈ ವರೆಗೂ 35,33,550 ಮಂದಿ ಸೋಂಕಿಗೊಳಗಾಗಿದ್ದಾರೆ. ಅಲ್ಲದೆ, 2,46,900 ಮಂದಿ ಬಲಿಯಾಗಿದ್ದಾರೆ. ಈ ನಡುವೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗುತ್ತಿದ್ದು, ಸುಮಾರು 11,44,000 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಅಮೆರಿಕಾ ಒಂದರಲ್ಲೇ ಕಳೆದ 24 ಗಂಟೆಗಳಲ್ಲಿ 10,550 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಒಟ್ಟು ಸೋಂಕಿತರ ಸಂಖ್ಯೆ ಆ ರಾಷ್ಟ್ರದಲ್ಲಿ 11,71,350ಕ್ಕೆ ಏರಿಕೆಯಾಗಿದೆ.
ಸ್ಪೇನ್ ನಲ್ಲಿ ಒಂದೇ ದಿನದಲ್ಲಿ 1,533 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 2,47,100ಕ್ಕೆ ಏರಿಕೆಯಾಗಿದೆ. ಇನ್ನು ಇಟಲಿಯಲ್ಲಿ 2,10,500, ಬ್ರಿಟನ್ ನಲ್ಲಿ 1,86,500, ಫ್ರಾನ್ಸ್ ನಲ್ಲಿ 1,68,300, ಜರ್ಮನಿಯಲ್ಲಿ 1,65,100 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.