ಕಾಸರಗೋಡು: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕಾರ್ಯಾಚರನೆಯಲ್ಲಿ ಮುಂಚೂಣಿಯಲ್ಲಿರುವ ಜಿಲ್ಲಾಧಿಕಾರಿ ಡಾ. ಡಿ.ಸಜಿತ್‍ಬಾಬು, ಐಜಿಗಳಾದ ವಿಜಯ್ ಸಖಾರೆ, ಅಶೋಕ್ ಯಾದವ್ ಸ್ವಯಂ ಕ್ವಾರಂಟೈನ್‍ನಲ್ಲಿದ್ದಾರೆ. ಕೋವಿಡ್ ಬಾಧಿಸಿದ ದೃಶ್ಯಮಾಧ್ಯಮ ಪ್ರತಿನಿಧಿಯೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಇವರು ಸ್ವಯಂ ನಿಗಾದಲ್ಲಿ ಉಳಿಯಲು ತೀರ್ಮಾನಿಸಿದ್ದಾರೆ. ಇವರಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರ ಮಾದರಿ ತಪಾಸಣೆಯ ಫಲಿತಾಂಶ ನೆಗೆಟಿವ್ ಆಗಿದೆ.
ಜಿಲ್ಲೆಯಲ್ಲಿ ಈ ವರೆಗೆ ಸೋಂಕು ಖಚಿತಗೊಂಡಿದ್ದ 167 ಮಂದಿ ಗುಣಮುಖರಾಗಿದ್ದಾರೆ. ಪ್ರಸಕ್ತ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 11 ಮಂದಿ ಪಾಸಿಟಿವ್ ರೋಗಿಗಳಿದ್ದಾರೆ. ಜಿಲ್ಲೆಯಲ್ಲಿ ರಿಕವರಿ ರೇಟ್ ಶೇ 93.8 ಆಗಿದೆ. ಜಿಲ್ಲೆಯಲ್ಲಿ ಒಟ್ಟು 1795 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 1764 ಮಂದಿ ಹಾಗೂ ಆಸ್ಪತ್ರೆಗಳಲ್ಲಿ, 31 ಮಂದಿ ನಿಗಾದಲ್ಲಿದ್ದಾರೆ. ಗುರುವಾರ ನೂತನವಾಗಿ 6 ಮಂದಿಯನ್ನು ಐಸೊಲೇಷನ್ ವಾರ್ಡಿಗೆ ದಾಖಲಿಸಲಾಗಿದೆ. ನಿಗಾದಲ್ಲಿದ್ದ230 ಮಂದಿ ತಮ್ಮ ಕಾಲಾವಧಿ ಪೂರ್ಣಗೊಳಿಸಿದ್ದಾರೆ. ಜಿಲ್ಲೆಯಲ್ಲಿ 4436 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 3630 ಮಂದಿಯ ಫಲಿತಾಂಶನೆಗೆಟಿವ್ ಆಗಿದೆ. 473 ಮಂದಿಯ ಫಲಿತಾಂಶ ಇನ್ನಷ್ಟೆ ಲಭಿಸಬೇಕಾಗಿದೆ.