ಕಾಸರಗೋಡು: ಜಿಲ್ಲೆಯಲ್ಲಿ ಇಂದು(ಭಾನುವಾರ) ಕೂಡ ಹೊಸ ಕೊರೊನಾ ಸೋಂಕು ಪ್ರಕರಣ ದಾಖಲಾಗಿಲ್ಲ. ಅದೇ ವೇಳೆ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 179 ಮಂದಿಗೆ ಸೋಂಕು ಬಾ„ಸಿದ್ದು, ಈ ಪೈಕಿ 172 ಮಂದಿ ಗುಣಮುಖರಾಗಿದ್ದಾರೆ. 7 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ರಿಕವರಿ ರೇಟ್ ಶೇ.96.6 ಆಗಿದೆ.
ಜಿಲ್ಲೆಯಲ್ಲಿ 1604 ಮಂದಿ ಆಸ್ಪತ್ರೆಗಳಲ್ಲಿ, 29 ಮಂದಿ ಮನೆಗಳಲ್ಲಿ ನಿಗಾದಲ್ಲಿದ್ದಾರೆ. ಭಾನುವಾರ ನೂತನವಾಗಿ 6 ಮಂದಿಯನ್ನು ಐಸೊಲೇಷನ್ ವಾರ್ಡಿಗೆ ದಾಖಲಿಸಲಾಗಿದೆ. 316 ಮಂದಿ ತಮ್ಮ ನಿಗಾ ಕಾಲಾವಧಿ ಪೂರ್ಣಗೊಳಿಸಿದ್ದಾರೆ. ಜಿಲ್ಲೆಯಲ್ಲಿ 4808 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಲಭ್ಯ 3983 ಮಂದಿಯ ಫಲಿತಾಂಶ ನೆಗೆಟಿವ್ ಆಗಿದೆ.
ಕಾಸರಗೋಡು ಜಿಲ್ಲೆಯ ಹಾಟ್ ಸ್ಪಾಟ್‍ಗಳು : ಕಾಸರಗೋಡು ನಗರಸಭೆ, ಚೆಂಗಳ, ಚೆಮ್ನಾಡ್, ಮೊಗ್ರಾಲ್ ಪುತ್ತೂರು, ಅಜಾನೂರು, ಉದುಮ ಗ್ರಾಮ ಪಂಚಾಯತ್‍ಗಳು ಕೊವಿಡ್ 19 ಕಾಸರಗೋಡು ಜಿಲ್ಲೆಯ ಹಾಟ್‍ಸ್ಪಾಟ್‍ಗಳಾಗಿವೆ. ಮೇ 4 ರಿಂದ ಜಿಲ್ಲೆಯ ಉಳಿದೆಡೆ ಘೋಷಿಸಲಾದ ವಿನಾಯಿತಿ ಹಾಟ್ ಸ್ಪಾಟ್ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದ್ದಾರೆ.
ಕೇರಳದಲ್ಲಿ ಹೊಸ ಪ್ರಕರಣ ಇಲ್ಲ :
ರಾಜ್ಯದಲ್ಲಿ ಭಾನುವಾರ ಹೊಸದಾಗಿ ಕೊರೊನಾ ಸೋಂಕು ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಒಬ್ಬರು ಗುಣಮುಖರಾಗಿದ್ದಾರೆ. ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಸರಗೋಡಿನ ವ್ಯಕ್ತಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ರಾಜ್ಯದಲ್ಲಿ ಒಟ್ಟು ಇದು ವರೆಗೆ 499 ಮಂದಿಗೆ ಸೋಂಕು ಬಾ„ಸಿದ್ದು, ಒಟ್ಟು 401 ಮಂದಿ ಗುಣಮುಖರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ 95 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಒಟ್ಟು 21720 ಮಂದಿ ನಿಗಾದಲ್ಲಿದ್ದಾರೆ. ಅವರಲ್ಲಿ 21332 ಮಂದಿ ಮನೆಗಳಲ್ಲೂ, 388 ಮಂದಿ ಆಸ್ಪತ್ರೆಗಳಲ್ಲೂ ನಿಗಾದಲ್ಲಿದ್ದಾರೆ. ರೋಗ ಲಕ್ಷಣಗಳಿರುವ 32217 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ ಲಭ್ಯ 31611 ನೆಗೆಟಿವ್ ಆಗಿವೆ. ರಾಜ್ಯದಲ್ಲಿ ಒಟ್ಟು 84 ಹಾಟ್‍ಸ್ಪಾಟ್‍ಗಳನ್ನು ಗುರುತಿಸಲಾಗಿದೆ.
25 ಕೇಸು ದಾಖಲು : ಲಾಕ್ ಡೌನ್ ಆದೇಶ ಉಲ್ಲಂಘಿಸಿದ
ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 25 ಕೇಸುಗಳನ್ನು ದಾಖಲಿಸಲಾಗಿದೆ. 47 ಮಂದಿಯನ್ನು ಬಂ„ಸಲಾಗಿದ್ದು, 12 ವಾಹನಗಳನ್ನು ವಶಪಡಿಸಲಾಗಿದೆ. ಮಂಜೇಶ್ವರ ಪೆÇಲೀಸ್ ಠಾಣೆಯಲ್ಲಿ 1 ಕೇಸು, ಕುಂಬಳೆ 2, ಕಾಸರಗೋಡು 3, ವಿದ್ಯಾನಗರ 3, ಮೇಲ್ಪರಂಬ 5, ಬೇಡಡ್ಕ 3, ಚಂದೇರ 1, ವೆಳ್ಳರಿಕುಂಡ್ 4, ಚಿತ್ತಾರಿಕಲ್ 3 ಕೇಸು ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಈ ವರೆಗೆ 2038 ಕೇಸುಗಳನ್ನು ದಾಖಲಿಸಲಾಗಿದೆ. 2576 ಮಂದಿಯನ್ನು ಬಂಧಿಸಲಾಗಿದ್ದು, 842 ವಾಹನಗಳನ್ನು ವಶಪಡಿಸಲಾಗಿದೆ.