ನವದೆಹಲಿ: ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭಾನುವಾರ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿ ಪ್ರಧಾನಿ ನರೇಂದ್ರಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಹುತಾತ್ಮ ಯೋಧರ ಪರಾಕ್ರಮ ಮತ್ತು ತ್ಯಾಗ ಎಂದಿಗೂ ಮರೆಯಲಾಗುವುದಿಲ್ಲ ಎಂದು ಹೇಳಿದ್ದಾರೆ.
ಹಂದ್ವಾರದಲ್ಲಿ ಹುತಾತ್ಮರಾದ ಧೈರ್ಯವಂತ ಯೋಧರು ಮತ್ತು ಭದ್ರತಾ ಸಿಬ್ಬಂದಿಗೆ ಗೌರವ ನಮನಗಳು. ಅವರ ತ್ಯಾಗ ಮತ್ತು ಶೌರ್ಯ ಎಂದಿಗೂ ಮರೆಯಲಾಗದು ಎಂದು ಪ್ರಧಾನಿ ಟ್ವೀಟ್ ನಲ್ಲಿ ಹೇಳಿದ್ದಾರೆ.
ಹುತಾತ್ಮ ಯೋಧರು ಸಮರ್ಪಣಾ ಮನೋಭಾವದಿಂದ ನಾಗರಿಕರ ರಕ್ಷಣೆಗೆ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಪ್ರಧಾನಿಯವರು ಹುತಾತ್ಮರ ಕುಟುಂಬಗಳಿಗೆ ಮತ್ತು ಅವರ ಸ್ನೇಹಿತರಿಗೆ ಸಂತ್ವಾನ ಹೇಳಿದ್ದಾರೆ.
Tributes to our courageous soldiers and security personnel martyred in Handwara. Their valour and sacrifice will never be forgotten. They served the nation with utmost dedication and worked tirelessly to protect our citizens. Condolences to their families and friends.
15.2K people are talking about this