ಕಾಸರಗೋಡು: ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಕರಂದಕ್ಕಾಡು ಇದರ ವಿಶ್ವಕರ್ಮ ಯುವಕ ಸಂಘ ಕಾಸರಗೋಡು ಇದರ ನೇತೃತ್ವದಲ್ಲಿ ಸ್ವಸಮಾಜದ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.
ಕಾಸರಗೋಡು ನಗರಠಾಣೆ ಎಸ್.ಐ. ನಳಿನಾಕ್ಷನ್ ಅವರು ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಸಂಸ್ಥೆಯ ಅಧ್ಯಕ್ಷ ಶೀತಲ್, ಕಾರ್ಯದರ್ಶಿ ವಸಂತ ಕೆರೆಮನೆ, ಕೋಶಾಧಿಕಾರಿ ಸತ್ಯನಾರಾಯಣ ಕಾಸರಗೋಡು ಹಾಗು ಸದಸ್ಯರು ಉಪಸ್ಥಿತರಿದ್ದರು.