ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣ ದಾಖಲಾಗಿಲ್ಲ. ಜಿಲ್ಲೆಯಲ್ಲಿ ಒಟ್ಟು 179 ಮಂದಿಗೆ ರೋಗ ಬಾ„ಸಿದ್ದು, 171 ಮಂದಿ ಗುಣಮುಖರಾಗಿದ್ದಾರೆ. 8 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಶನಿವಾರ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢೀಕರಿಸಲಾಗಿದೆ. ಇದೇ ವೇಳೆ 8 ಮಂದಿ ಗುಣಮುಖರಾಗಿದ್ದಾರೆ. ಕಣ್ಣೂರು ಮತ್ತು ವಯನಾಡು ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಗೊಂಡಿದೆ. ಕಣ್ಣೂರು ಜಿಲ್ಲೆಯಲ್ಲಿ 6 ಮತ್ತು ಇಡುಕ್ಕಿ ಜಿಲ್ಲೆಯಲ್ಲಿ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಳೆದ ಒಂದು ತಿಂಗಳಿಗೂ ಹೆಚ್ಚು ದಿನಗಳಿಂದ ವಯನಾಡಿನಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿರಲಿಲ್ಲ. ಈ ತನಕ ಗ್ರೀನ್ ಝೋನ್‍ನಲ್ಲಿದ್ದ ವಯನಾಡು ಜಿಲ್ಲೆ ಆರೆಂಜ್ ಝೋನ್ ಯಾದಿಗೆ ಸೇರ್ಪಡೆಗೊಂಡಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ವರೆಗೆ ಕೇರಳ ರಾಜ್ಯದಲ್ಲಿ 499 ಮಂದಿಗೆ ಸೋಂಕು ಬಾಧಿಸಿದ್ದು, ಪ್ರಸ್ತುತ 96 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ 21894 ಮಂದಿ ನಿಗಾದಲ್ಲಿದ್ದು, 21484 ಮಂದಿ ಮನೆಗಳಲ್ಲೂ, 410 ಮಂದಿ ವಿವಿಧ ಆಸ್ಪತ್ರೆಗಳಲ್ಲೂ ನಿಗಾದಲ್ಲಿದ್ದಾರೆ. ಶನಿವಾರ ವಿವಿಧ ಆಸ್ಪತ್ರೆಗಳಿಗೆ ಶಂಕಿತ 80 ಮಂದಿಯನ್ನು ದಾಖಲಿಸಲಾಗಿದೆ. ಈ ತನಕ 31183 ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿದ್ದು, ಲಭ್ಯ 30,358 ನೆಗೆಟಿವ್ ಆಗಿದೆ.