ನವದೆಹಲಿ: ಕೊರೋನಾ ವೈರಸ್ ಆರ್ಭಟಕ್ಕೆ ಭಾರತ ತತ್ತರಿಸಿದ್ದು, ದಿನೇ ದಿನೇ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,171 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 204 ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,171 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,98,706ಕ್ಕೆ ಏರಿಕೆಯಾಗಿದೆ. ಅಂತೆಯೇ 24 ಗಂಟೆಗಳಲ್ಲಿ 204 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 5,598ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 97,581 ಸಕ್ರಿಯ ಪ್ರಕರಣಗಳಿದ್ದು, 95,526 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿನ ಕೊರೋನಾ ವೈರಸ್ ಸ್ಥಿತಿಗತಿ ಇಂತಿದೆ.
India reports 8,171 new #COVID19 cases & 204 deaths in the last 24 hours. Total number of cases in the country now at 1,98,706 including 97,581 active cases, 95,526 cured/discharged/migrated and 5,598 deaths: Ministry of Health and Family Welfare