ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯಾದ ರಜೌರಿಯ ಕಲಕೋಟೆ ಪ್ರದೇಶದಲ್ಲಿ ಗುರುವಾರ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿವೆ.
ಕಲಕೋಟೆಯ ಪಂಜಾ ಮೆಹಾರಿ ಗ್ರಾಮದಲ್ಲಿ ಮುಂಜಾನೆ ಸೇನೆ, ಜಮ್ಮು-ಕಾಶ್ಮೀರ ಪೆÇಲೀಸ್ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಶೋಧ ಕಾರ್ಯಾಚರಣೆ ವೇಳೆ ಜಂಟಿ ತಂಡಕ್ಕೆ ಮೂರ್ನಾಲ್ಕು ಭಯೋತ್ಪಾದಕರ ಗುಂಪು ಎದುರಾಗಿದ್ದು, ಈ ವೇಳೆ ಪರಸ್ಪರ ಗುಂಡಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.