ಕಾಸರಗೋಡು: ಕುಟುಂಬಶ್ರೀಯ ಕೊಡೆಗಳ ಮೂಲಕ ಸಾಮಾಜಿಕ ಅಂತರ ಪಾಲಿಸಬಹುದು ಎಂಬ ಕಾರ್ಯಕ್ರಮದ ಜಿಲ್ಲಾ ಮಟ್ಟದ ಉದ್ಘಾಟನೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಕುಟುಂಬಶ್ರೀ ಸಿ.ಡಿ.ಎಸ್. ವತಿಯಿಂದ ಉತ್ತಮ ಗುಣಮಟ್ಟದ ಕೊಡೆಗಳನ್ನು ಮಾರಾಟ ನಡೆಸಲಾಗುತ್ತಿದೆ.
ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಉದ್ಘಾಟಿಸಿದರು. ಜಿಲ್ಲಾ ಹಣಕಾಸು ಅಧಿಕಾರಿ ಕೆ.ಸತೀಶನ್, ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್ ಎಂ. ಕುಟುಂಬಶ್ರೀ ಜಿಲ್ಲಾ ಮಿಷನ್ ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲಾ ಮಿಷನ್ ಸಂಚಾಲಕ ಟಿ.ಟಿ.ಸುರೇಂದ್ರನ್ ಸ್ವಾಗತಿಸಿದರು. ಎ.ಡಿ.ಎಂ.ಸಿ.ಹರಿದಾಸ್ ವಂದಿಸಿದರು.