ಕಾಸರಗೋಡು: ಕೇರಳ ಸರ್ಕಾರವು ಯಾವುದೇ ಪೂರ್ವ ಯೋಜನೆಯಿಲ್ಲದೆ ಆನ್‍ಲೈನ್ ವಿದ್ಯಾಭ್ಯಾಸವನ್ನು ಜಾರಿಗೆ ತರುವ ಮೂಲಕ ಹಲವಾರು ಪರಿಶಿಷ್ಟ ಜಾತಿ, ಪಂಗಡಗಳ ಬಡ ವಿದ್ಯಾರ್ಥಿಗಳನ್ನು ವಂಚಿಸಲಾಗಿದೆ. ಈ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೀಘ್ರದಲ್ಲೇ ತುರ್ತು ವ್ಯವಸ್ಥೆಯನ್ನು ಮಾಡಬೇಕೆಂದು ರಾಜ್ಯ ಪರಿಶಿಷ್ಟ ಜಾತಿ ಮೋರ್ಚಾ ಉಪಾಧ್ಯಕ್ಷ ಎ.ಕೆ ಕಯ್ಯಾರ್ ತಿಳಿದಿದಾರೆ.
ಅವರು ಬುಧವಾರ ಕಾಸರಗೋಡು ವಿದ್ಯಾಭ್ಯಾಸ ಕಛೇರಿಯ ಮುಂದೆ ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾ ಸಮಿತಿಯ ವತಿಯಿಂದ ನಡೆಸಲಾದ ಧರಣಿಯನ್ನು ಉದ್ಘಾಟಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಸಂಪತ್ ಪೆರ್ನಡ್ಕ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿ, ಮಲಪ್ಪುರಂನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಸರಕಾರ ಕಾರಣವಾಗಿದ್ದು, ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಸರ್ಕಾರವು ತುರ್ತು ಪರಿಹಾರ ನೀಡಬೇಕು ಎಂದು ತಿಳಿಸಿದರು. ಪರಿಶಿಷ್ಟ ಜಾತಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನಾರಾಯಣ. ಪಿ ಪೆರಡಾಲ ಸ್ವಾಗತಿಸಿದರು. ಶರತ್, ಧನಂಜಯ ಉಪಸ್ಥಿತರಿದ್ದು ಶರತ್ ವಂದಿಸಿದರು.