ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,522 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5,66,840ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಮೊನ್ನೆ ಒಂದೇ ದಿನ ಮಹಾಮಾರಿ ವೈರಸ್ 418 ಮಂದಿಯನ್ನು ಬಲಿಪಡೆದುಕೊಂಡಿದ್ದು, ಈ ವರೆಗೂ ವೈರಸ್'ನಿಂದ ಸಾವನ್ನಪ್ಪಿದವರ ಸಂಖ್ಯೆ 16,893ಕ್ಕೆ ತಲುಪಿದೆ. 5,66,840 ಮಂದಿ ಸೋಂಕಿತರ ಪೈಕಿ 3,34,822 ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ದೇಶದಲ್ಲಿನ್ನೂ 2,15,125 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ.
ಈ ನಡುವೆ ದೇಶದ ವಿವಿಧ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚಿ ಅಂದರೆ 5,257 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 181 ಜನರು ಸಾವನ್ನಪ್ಪಿದ್ದಾರೆ. ಇನ್ನು ತಮಿಳುನಾಡಿನಲ್ಲಿ 3949 ಜನರಿಗೆ ಸೋಂಕು ಹಬ್ಬಿದ್ದು 62 ಮಂದಿ ಬಲಿಯಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2084 ಜನರಲ್ಲಿ ಸೋಂಕು ಪತ್ತೆಯಾಗಿದ್ದು 54 ಮಂದಿ ಬಲಿಯಾಗಿದ್ದಾರೆ.