HEALTH TIPS

ಖಾಸಗೀಕರಣದತ್ತ ಭಾರತೀಯ ರೈಲ್ವೆ; ಖಾಸಗಿ ಹೂಡಿಕೆಗೆ ಕೇಂದ್ರ ಸರ್ಕಾರದಿಂದ ಮುಕ್ತ ಆಹ್ವಾನ

          ನವ ದೆಹಲಿ ;  ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ 109ಕ್ಕೂ ಹೆಚ್ಚು ಪ್ರಯಾಣಿಕರ ರೈಲು ಸೇವೆಗಳ ಕಾರ್ಯಾಚರಣೆಯಲ್ಲಿ ಸರ್ಕಾರದ ಜೊತೆಗೆ ಭಾಗವಹಿಸಲು ಇಚ್ಚಿಸುವ ಅರ್ಹ ಖಾಸಗಿ ಕಂಪೆನಿಗಳಿಗೆ ರೈಲ್ವೆ ಇಲಾಖೆಯಲ್ಲಿ ಹೂಡಿಕೆ ಮಾಡಲು ಮುಕ್ತ ಆಹ್ವಾನ ನೀಡಿದೆ. ಅಲ್ಲದೆ, 30,000 ಕೋಟಿ ರೂ. ವರೆಗೆ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸಿದೆ. ಈ ಮೂಲಕ ಐತಿಹಾಸಿಕ ಭಾರತೀಯ ರೈಲ್ವೆಯನ್ನೂ ಖಾಸಗೀಕರಣ ಮಾಡಲು ಹೊರಟಿದೆ.

       "ಭಾರತೀಯ ರೈಲ್ವೆ ಇಲಾಖೆಯಲ್ಲಿ ಆಧುನಿಕ ತಂತ್ರಜ್ಞಾನವಾದ ರೋಲಿಂಗ್ ಸ್ಟಾಕ್ ಅನ್ನು ಪರಿಚಯಿಸುವುದು.ಕಡಿಮೆ ನಿರ್ವಹಣೆ, ಕಡಿಮೆ ಸಾಗಣೆ ಸಮಯ, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು, ಸುರಕ್ಷತೆ ಹಾಗೂ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವವನ್ನು ಒದಗಿಸುವ ಸಲುವಾಗಿ ಖಾಸಗಿ ಹೂಡಿಕೆದಾರರಿಗೆ ಅವಕಾಶ ನೀಡಲಾಗುತ್ತಿದೆ. ಮತ್ತು ಈ ಹೂಡಿಕೆಯ ಕಾಲಾವಧಿ 35 ವರ್ಷವಾಗಿರುತ್ತದೆ" ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

     "ಭಾರತೀಯ ರೈಲ್ವೆ ಜಾಲದಾದ್ಯಂತ 12 ಕ್ಲಸ್ಟರ್‌ಗಳಾಗಿ ವಿಂಗಡಿಸಿ, 151 ಆಧುನಿಕ ರೈಲುಗಳನ್ನು ಪರಿಚಯಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಭವಿಷ್ಯದಲ್ಲಿ ಅಭಿವೃದ್ಧಿಪಡಿಸುವ ಎಲ್ಲಾ ರೈಲುಗಳು ಗರಿಷ್ಟ 160 ಕಿಮೀ ವೇಗದಲ್ಲಿ ಚಲಿಸುವಂತೆ ಹಾಗೂ ಪ್ರತಿ ರೈಲು ಕನಿಷ್ಠ 16 ಬೋಗಿಗಳನ್ನು ಹೊಂದಿರುವಂತೆ ವಿನ್ಯಾಸಗೊಳಿಸಲು ಉದ್ದೇಶಿಸಲಾಗಿದೆ.

     

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries