ಬೆಂಗಳೂರು: ಕೇಂದ್ರ ಸರ್ಕಾರ ಪ್ರಾಥಮಿಕ ಮತ್ತು ಉನ್ನತ ಶಿಕ್ಷಣದಲ್ಲಿ ಪ್ರಮುಖ ಸುಧಾರಣೆಗಳನ್ನು ಜಾರಿಗೆ ತಂದಿದ್ದು, ಕರ್ನಾಟಕವು ಎರಡು ಪ್ರಮುಖ ಅಂಶಗಳನ್ನು ಪರಿಗಣಿಸಬೇಕಾಗಿದೆ.
ಹಲವು ಪ್ರಮುಖ ವಿಷಯಗಳನ್ನು ಅನುಷ್ಠಾನಗೊಳಿಸಬೇಕಾಗಿದೆ, ಯಾವುದೇ ಸಂಶೋಧನೆ ಬೇಕಿಲ್ಲ, ಮುಂದಿನ ದಿನಗಳಲ್ಲಿ ರಾಷ್ಟ್ರೀ ಶಿಕ್ಷಣ ನೀತಿ ಪರಿಣಾಮಕಾರಿಯಾದ ಕಟ್ಟು ನಿಟ್ಟಿನ ಹೆಜ್ಜೆ ಇಡಬೇಕಾದ ಅವಶ್ಯಕತೆಯಿದೆ ಎಂದು ನೂತನ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷ ಡಾ. ಕಸ್ತೂರಿ ರಂಗನ್ ಹೇಳಿದ್ದಾರೆ.
ತಾವು ಜ್ಞಾನ ಆಯೋಗದ ಅಧ್ಯಕ್ಷರಾಗಿದ್ದ ವೇಳೆ ಕರ್ನಾಟಕ ಈಗಾಗಲೇ ಶಿಕ್ಷಣ ನೀತಿಯನ್ನು ಹೊಂದಿದೆ, ಸದ್ಯ ಆ ನೀತಿಯ ಅಡಿ ಮತ್ತೆ ಕೆಲಸ ಮಾಡುವ ಅವಶ್ಯಕತೆಯಿದೆ, ಆರಂಭಿಕರಿಗಾಗಿ, ರಾಜ್ಯವು ಸರಿಯಾಗಿ ಪುನರ್ರಚಿಸುವತ್ತ ಗಮನ ಹರಿಸಬಹುದು ಎಂದು ಅವರು ಹೇಳಿದ್ದಾರೆ. ಅಂಗನವಾಡಿಗಳು ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು, ಮತ್ತು ಆರಂಭಿಕ ಬಾಲ್ಯದ ಆರೈಕೆ ಹಾಗೂ ಶಿಕ್ಷಣದ ಕಡೆಗೆ ಗಮನ ಹರಿಸಬೇಕು, 3ರಿಂದ 6 ವರ್ಷದ ಮಕ್ಕಳಿಗೆ ಉತ್ತಮ ಗುಣಮಟ್ಟದ, ಉಚಿತ, ಸುರಕ್ಷಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೆಲಸ ಆಗಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಕೇಂದ್ರ ಸರಕಾರ ಬುಧವಾರ ಪ್ರಕಟಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ವಾಗತಿಸಿರುವ ಡಿಸಿಎಂ ಅಶ್ವತ್ಥ ನಾರಾಯಣ, ಹಲವು ವರ್ಷಗಳಿಂದ ನಮ್ಮ ಶಿಕ್ಷಣ ನೀತಿಯೇ ಬದಲಾಗಿಲ್ಲ ಅಂದರೆ ಅಚ್ಚರಿ ಆಗುತ್ತದೆ. ನಮಗೆಲ್ಲರಿಗೂ ಗೊತ್ತಿರುವಂತೆ ಶಿಕ್ಷಣ ಎನ್ನವುದು ಮನುಕುಲವನ್ನು ಮುನ್ನಡೆಸುವ ಚಾಲಕ ಶಕ್ತಿ. ಸಶಕ್ತ ಸಮಾಜದ ಆತ್ಮ. ಯಾವುದೇ ದೇಶವನ್ನು ಬಲಿಷ್ಠವಾಗಿ, ಭವ್ಯವಾಗಿ ನಿರ್ಮಾಣ ಮಾಡಬಲ್ಲ ಶಕ್ತಿ ಅದಕ್ಕೆ ಮಾತ್ರ ಇದೆ. ನರೇಂದ್ರ ಮೋದಿ ಅವರು ಮತ್ತೊಂದು ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದಾರೆ ಎಂದಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು ರಾಜ್ಯ ಶಿಕ್ಷಣ ಇಲಾಖೆ ಸ್ವಾಗತಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಶಿಕ್ಷಣದಿಂದ ಸಮಗ್ರ ಅಭಿವೃದ್ಧಿ ಎಂಬ ಧ್ಯೇಯವಾಕ್ಯದ ಆಧಾರದ ಮೇಲೆ, ನೂತನ ನೀತಿಗೆ ಅನುಮೋದನೆ ನೀಡಲಾಗಿದೆ. 34 ವರ್ಷಗಳ ಬಳಿಕ ಬದಲಾವಣೆ ಮಾಡಿ ತಂದಿರುವ ಹೊಸ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ಇಲಾಖೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಹೇಳಿದ್ದಾರೆ.