ಕಾಸರಗೋಡು: ದಿನಂಪ್ರತಿಯ ಘಟನೆಗಳನ್ನು ಜನರಿಗೆ ತಲುಪಿಸುವ ಹಾಗು ಎಚ್ಚರಿಸುವ, ಜಾಗೃತಿ ಮೂಡಿಸುವ ಪತ್ರಿಕೆ ಸಮಾಜದ ಜೀವನಾಡಿ ಎಂದು ಹಿರಿಯ ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅವರು ಹೇಳಿದರು.
ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯ ಆಶ್ರಯದಲ್ಲಿ ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನದಲ್ಲಿ ನಡೆದ ಕನ್ನಡ ಪತ್ರಿಕಾ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ, ಬಿಜೆಪಿ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ನ್ಯಾಯವಾದಿ ಸದಾನಂದ ರೈ ಅವರು ಪತ್ರಿಕೆಯ ಅಗತ್ಯತೆಯ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯ ಸ್ಥಾಪಕ ಅಧ್ಯಕ್ಷ ವಾಮನ ರಾವ್ ಬೇಕಲ್, ಪತ್ರಕರ್ತರಾದ ಸಾಯಿಭದ್ರ ರೈ, ವಿವೇಕ್ ಆದಿತ್ಯ ಮೊದಲಾದವರು ಶುಭಹಾರೈಸಿದರು.
ಸಂಘಟಕ ಜಗದೀಶ್ ಕೂಡ್ಲು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೆಸಿಎನ್ ಚಾನೆಲ್ ನಿರ್ದೇಶಕ ಪುರುಷೋತ್ತಮ ನಾೈಕ್ ದೃಶ್ಯ ಮಾಧ್ಯಮದ ಸವಾಲು ಬಗ್ಗೆ ಮಾತನಾಡಿ ವಂದಿಸಿದರು.