ಉಪ್ಪಳ: ಕೇರಳ ರಾಜ್ಯ ಶಿಕ್ಷಣ ಇಲಾಖೆ ನಡೆಸಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಾದ ವಿಘ್ನೇಶ್, ನಫೀಸತ್ ಮಿಸ್ರಿಯ ಹಾಗೂ ಖದೀಜತ್ ಶಮ್ನೀಝ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಗಳಿಸಿದ್ದಾರೆ. ಇವರ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆಯನ್ನು ಸಲ್ಲಿಸಿದೆ.