ಕಾಸರಗೋಡು: ಕಂಟೈ ನ್ಮೆಂಟ್ ಝೋನ್ ಗಳನ್ನು ಹೊರತು ಪಡಿಸಿ ಇತರ ಪ್ರದೇಶಗಳ ಪಡಿತರ ಅಂಗಡಿಗಳು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಚಟುವಟಿಕೆ ನಡೆಸಬಹುದು. ಕಂಟ್ಮೆ ನ್ಮೆಂಟ್ ಝೋನ್ ಗಳಲ್ಲಿ ಬೆಳಗ್ಗೆ 11 ರಿಂದ ಸಂಜೆ 5 ಗಂಟೆ ವರೆಗೆ ಪಡಿತರ ಅಂಗಡಿಗಳು ಚಟುವಟಿಕೆ ನಡೆಸಬಹುದು.
ಖಾಸಗಿ ಶಿಕ್ಷಣ ಸಂಸ್ಥೆ ಗಳಲ್ಲಿ ತಪಾಸಣೆ:
ಲಾಕ್ ಡೌನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಂದ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಬಗ್ಗೆ ದೂರುಗಳು ಲಭಿಸಿರುವ ಹಿನ್ನೆಲೆಯಲ್ಲಿ, ಈ ಸಂಬಂಧ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಆದೇಶ ಪ್ರಕಟಿಸಿದರು.
ಪ್ಲಸ್ ಟು ವರೆಗೆ ಶಿಕ್ಷಣ ಒದಗಿಸುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಈ ಬಗ್ಗೆ ತನಿಖೆ ನಡೆಯಲಿದೆ. ಇಂಥಾ ಕೆಲವು ಸಂಸ್ಥೆಗಳಲ್ಲಿ ಸಿಬ್ಬಂದಿಗೆ ವೇತನ ನೀಡುತ್ತಿಲ್ಲ ಎಂಬ ದೂರೂ ಕೇಳಿಬಂದಿತ್ತು. ಶಿಕ್ಷಣ ಉಪ ನಿರ್ದೇಶಕಿ, ಜಿಲ್ಲಾ ಶಿಕ್ಷಣಾಧಿಕಾರಿ, ಸಹಾಯಕ ಶಿಕ್ಷಣಾಧಿಕಾರಿಗಳು ಸೇರಿರುವ ಸಮಿತಿ ಕಾಸರಗೋಡು ಜಿಲ್ಲೆಯ ಎಲ್ಲ ಶಿಕ್ಷಣಾಲಯಗಳಲ್ಲಿ ಈ ಸಂಬಂಧ ತಪಾಸಣೆ ನಡೆಸಿ, ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಿದ್ದಾರೆ.