ತಿರುವನಂತಪುರ: ಕರಿಪ್ಪೂರ್ ವಿಮಾನ ಅಪಘಾತ ದುರದೃಷ್ಟಕರ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಉತ್ತಮವಾಗಿದೆ ನಡೆಯುತ್ತಿದೆ ಎಂದು ಸಿಎಂ ಹೇಳಿದರು. ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 10 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಿಸಿವೆ. ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಕೇಂದ್ರ ನೆರವು ಘೋಷಿಸಿದ್ದಾರೆ.
ರಾಜ್ಯ ಸರ್ಕಾರವು ಮೃತ ಕುಟುಂಬಗಳಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಮತ್ತು ಸ್ವಲ್ಪ ಗಾಯಗೊಂಡವರಿಗೆ 50,000 ರೂ. ವಿಮಾ ಲಾಭದ ಜೊತೆಗೆ ಧನಸಹಾಯ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಕರಿಪ್ಪೂರ್ ದುರಂತದ ಬಗ್ಗೆ ನಾಗರಿಕ ವಿಮಾನಯಾನ ಸಚಿವರು ತೀವ್ರ ಸಂತಾಪ ವ್ಯಕ್ತಪಡಿಸಿದರು. ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಸ್ಥಳೀಯಾಡಳಿತಗಳು ಸಮಯೋಚಿತವಾಗಿ ಕಾರ್ಯನಿರ್ವಹಿಸಿದ್ದರಿಂದ ಸಾವಿನ ಪ್ರಮಾಣ ಕಡಿಮೆಯಾಯಿತೆಂದು ಅವರು ಹೇಳಿದರು.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ 10 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು. ಗಂಭೀರವಾಗಿ ಗಾಯಗೊಂಡವರಿಗೆ ಎರಡು ಲಕ್ಷ ಮತ್ತು ಸ್ವಲ್ಪ ಗಾಯಗೊಂಡವರಿಗೆ 50,000 ರೂ. ನೀಡಲಿದ್ದು ಎಲ್ಲರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಸಿಎಂ ಹೇಳಿದರು. ವಿಮಾನ ಅಪಘಾತವು ಅತ್ಯಂತ ದುಃಖದ ಘಟನೆ ಎಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಗಾಯಗೊಂಡವರನ್ನು ಭೇಟಿಯಾದರು. ಅಪಘಾತದ ಸ್ಥಳಕ್ಕೆ ಏರ್ ಇಂಡಿಯಾ ಅಧಿಕಾರಿಗಳು ಭೇಟಿ ನೀಡಿದರು. ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪೈಲಟ್‍ಗಳು ಸೇರಿದಂತೆ ಹದಿನೆಂಟು ಜನರು ಸಾವನ್ನಪ್ಪಿದ್ದಾರೆ.