ಮೊದಲು ಲಸಿಕೆ ಪಡೆಯುವವರು ಯಾರು?
ಲಸಿಕೆಯ ಮೊದಲ, ಎರಡನೇ ಹಾಗೂ ಮೂರನೇ ಹಂತದ ಪ್ರಯೋಗಗಳು ನಡೆಯುತ್ತಿದೆ.
ಪ್ರಯೋಗಗಳು ಬಹಳ ಮುಖ್ಯ. ಲಸಿಕೆ ಸುರಕ್ಷಿತವಾಗಿರಬೇಕು ಎಂದು ನಾವು ಅರ್ಥಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ವೈದ್ಯಕೀಯ ವೃತ್ತಿಪರರು ಮತ್ತು ಹಿರಿಯ ನಾಗರಿಕರು ಲಸಿಕೆ ಪಡೆಯುವವರಲ್ಲಿ ಮೊದಲಿಗರಾಗಿದ್ದಾರೆ ಅಂತ ಗ್ರಿಡ್ನೆವ್ ಹೇಳಿದ್ದಾರೆ.
ಅಂತಿಮ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ
ಈ ಹಿಂದಿನ ವರದಿಯಲ್ಲಿ, ಗಮಲೇಯ ನ್ಯಾಷನಲ್ ರಿಸರ್ಚ್ ಸೆಂಟರ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಕೊರೊನಾವೈರಸ್ ಲಸಿಕೆಯನ್ನು ಪರೀಕ್ಷಿಸುವ ಸ್ವಯಂಸೇವಕರ ಅಂತಿಮ ಪರಿಶೀಲನೆಯು ಭಾಗವಹಿಸುವ ಎಲ್ಲರಲ್ಲೂ ರೋಗನಿರೋಧಕ ಶಕ್ತಿಯನ್ನು ತೋರಿಸಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿತ್ತು.
ಜೂನ್ 18ರಿಂದ ಕ್ಲಿನಿಕಲ್ ಟ್ರಯಲ್ ಆರಂಭವಾಗಿತ್ತು
ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಜೂನ್ 18 ರಂದು ಪ್ರಾರಂಭವಾಗಿದ್ದು, ಈ ಪ್ರಯೋಗದಲ್ಲಿ 38 ಸ್ವಯಂಸೇವಕರು ಇದ್ದರು ಎನ್ನಲಾಗಿದೆ. ಮತ್ತು ಮೊದಲ ಗುಂಪನ್ನು ಜುಲೈ 15 ರಂದು ಮತ್ತು ಎರಡನೇ ಗುಂಪನ್ನು ಜುಲೈ 20 ರಂದು ಬಿಡುಗಡೆ ಮಾಡಲಾಯಿತು ಎನ್ನಲಾಗಿದೆ.ಇದಲ್ಲದೆ, ವೆಕ್ಟರ್ ಸ್ಟೇಟ್ ರಿಸರ್ಚ್ ಸೆಂಟರ್ ಆಫ್ ವೈರಾಲಜಿ ಮತ್ತು ಬಯೋಟೆಕ್ನಾಲಜಿ ಅಭಿವೃದ್ಧಿಪಡಿಸಿದ ಎರಡನೇ ಕೊವಿಡ್ -19 ಲಸಿಕೆ ಪ್ರಯೋಗದಲ್ಲಿ ಭಾಗವಹಿಸಿದ ಸ್ವಯಂಸೇವಕರು ಉತ್ತಮ ಆರೋಗ್ಯದಲ್ಲಿದ್ದಾರೆ ಮತ್ತು ವ್ಯಾಕ್ಸಿನೇಷನ್‌ನ ಯಾವುದೇ ಅಡ್ಡಪರಿಣಾಮಗಳು ಕಂಡುಬರುವುದಿಲ್ಲ ಎಂದು ತಿಳಿಸಿದ್ದಾರೆ.
Registration For Admission Click Here
Contact For Advertise 9567181417