ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 147 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ಸೋಂಕು ಬಾ„ತರು ವಾಸವಾಗಿರುವ ಸ್ಥಳಿಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ ಇಂತಿದೆ.
ಕಾಸರಗೋಡು ನಗರಸಭೆ 3, ಮುಳಿಯರು ಪಂಚಾಯತ್ 1, ಕುಂಬಳೆ ಪಂಚಾಯತ್ 1, ಚೆಮ್ನಾಡ್ ಪಂಚಾಯತ್ 37, ಕಾರಡ್ಕ ಪಂಚಾಯತ್ 3, ಮಂಗಲ್ಪಾಡಿ ಪಂಚಾಯತ್ 3, ಕಾಂಞಂಗಾಡ್ ನಗರಸಭೆ 5, ಉದುಮ ಪಂಚಾಯತ್ 73, ತ್ರಿಕರಿಪುರ ಪಂಚಾಯತ್ 1, ಪಳ್ಳಿಕ್ಕರೆ ಪಂಚಾಯತ್ 13, ವೆಸ್ಟ್ ಏಳೇರಿ 1, ಕಿನಾನೂರು-ಕರಿಂದಳಂ ಪಂಚಾಯತ್ 1, ಅಜಾನೂರು ಪಂಚಾಯತ್ 3, ಕೋಡೋಂ-ಬೇಳೂರು 1, ಬಳಾಲ್ 1 ಮಂದಿ ಸೋಂಕು ಬಾಧಿತರು.
ಮಾಸ್ಕ್ ಧರಿಸದ 337 ಮಂದಿ ವಿರುದ್ಧ ಕೇಸು : ಮಾಸ್ಕ್ ಧರಿಸದೇ ಇದ್ದ ಆರೋಪಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ 337 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಈ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ ದಾಖಲಾದ ಕೇಸುಗಳ ಒಟ್ಟು ಸಂಖ್ಯೆ 19913 ಆಗಿದೆ.
ಲಾಕ್‍ಡೌನ್ ಉಲ್ಲಂಘನೆ : 7 ಕೇಸುಗಳು : ಲಾಕ್‍ಡೌನ್ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 7 ಕೇಸುಗಳನ್ನು ದಾಖಲಿಸಲಾಗಿದೆ. 10 ಮಂದಿಯನ್ನು ಬಂಧಿಸಲಾಗಿದ್ದು, 2 ವಾಹನಗಳನ್ನು ವಶಪಡಿಸಲಾಗಿದೆ. ಕುಂಬಳೆ ಪೆÇಲೀಸ್ ಠಾಣೆಯಲ್ಲಿ 2 ಕೇಸುಗಳು, ಆದೂರು 2, ಮೇಲ್ಪರಂಬ 1, ಚಂದೇರ 1, ಚಿತ್ತಾರಿಕಲ್ 1 ಕೇಸು ದಾಖಲಾಗಿದೆ. ಈ ಮೂಲಕ ಈ ಪ್ರಕರಣಗಳಿಗೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ ದಾಖಲಾದ ಕೇಸುಗಳ ಒಟ್ಟು ಸಂಖ್ಯೆ 3366 ಆಗಿದೆ. 4532 ಮಂದಿಯನ್ನು ಬಂ„ಸಲಾಗಿದೆ. 1321 ವಾಹನಗಳನ್ನು ವಶಪಡಿಸಲಾಗಿದೆ.