ನವದೆಹೆಲಿ: ಆಗಸ್ಟ್ 5ರಂದು ಆಯೋಧ್ಯೆಯಲ್ಲಿ ನಡೆದ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ನೇರಪ್ರಸಾರವನ್ನು ದೇಶಾದ್ಯಂತ ಸುಮಾರು 160 ಮಿಲಿಯನ್ ಗೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ಪ್ರಸಾರ ಭಾರತಿ ಮಾಹಿತಿ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪ್ರಸಾರ್ ಭಾರತಿ ಸಿಇಒ ಶಶಿ ಎಸ್ ವೆಂಪತಿ ಅವರು ಆಗಸ್ಟ್ 5ರಂದು ನಡೆದ ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಕಾರ್ಯಕ್ರಮವನ್ನು ದೇಶಾದ್ಯಂತ ಸುಮಾರು 16 ಕೋಟಿಗೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಿ ಅವರು ಮಾಹಿತಿ ನೀಡಿದ್ದು, ಆಗಸ್ಟ್ 5ರಂದು ಬೆಳಗ್ಗೆ 10.45ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಈ ಕಾರ್ಯಕ್ರಮವನ್ನು ದೇಶದ ಸುಮಾರು 200 ಚಾನೆಲ್ ಗಳು ನೇರ ಪ್ರಸಾರ ಮಾಡಿದ್ದವು. ಈ ಕಾರ್ಯಕ್ರಮವನ್ನು ದೇಶಾದ್ಯಂತ ಸುಮಾರು 16 ಕೋಟಿಗೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂತ್ರಘೋಷಗಳ ನಡುವೆ ಬೆಳ್ಳಿ ಇಟ್ಟಿಗೆಗಳಿಗೆ ಪೂಜೆ ಮಾಡುವ ಮೂಲಕ ಶಿಲಾನ್ಯಾಸ ನೆರವೇರಿಸಿದ್ದರು.