HEALTH TIPS

ಕೇರಳದಲ್ಲಿ ಏರ್ ಇಂಡಿಯಾ ವಿಮಾನ ಅವಘಡ:ಇಬ್ಬರು ಪೈಲಟ್ ಗಳು ಸೇರಿ ಮೃತರ ಸಂಖ್ಯೆ 18, ಹಲವರ ಸ್ಥಿತಿ ಗಂಭೀರ

    ಕೊಚ್ಚಿ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ  ರನ್‌ವೇಯಿಂದ ಜಾರಿ ಅಪಘಾತದಲ್ಲಿ ಇಬ್ಬರು ಪೈಲಟ್ ಗಳು ಸೇರಿ ಒಟ್ಟು 18 ಮಂದಿ ಮೃತಪಟ್ಟಿದ್ದಾರೆ.
       ಸಂಜೆ 7:45 ಕ್ಕೆ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, 174  ಪ್ರಯಾಣಿಕರು 10 ಮಕ್ಕಳು 5 ವಿಮಾನ ಸಿಬ್ಬಂದಿಗಳು, ಇಬ್ಬರು ಪೈಲಟ್ ಗಳು  1344 ವಿಮಾನದಲ್ಲಿದ್ದರು. ರನ್ವೇಯಿಂದ ಕಣಿವೆಗೆ ಜಾರಿದ ಪರಿಣಾಮ ವಿಮಾನ ಇಬ್ಭಾಗವಾಗಿದೆ. 
     ಮಂಗಳೂರಿನಲ್ಲಿ ನಡೆದಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಪತನದ ಮಾದರಿಯಲ್ಲಿ ಈ ಘಟನೆ ನಡೆದಿದೆ. ನಾಗರಿಕ ವಿಮಾನಯಾನದ ಪ್ರಧಾನ ನಿರ್ದೇಶನಾಲಯ ಈ ಘಟನೆ ಸಂಬಂಧ ತನಿಖೆಗೆ ಆದೇಶಸಿದೆ. 
         2019 ರಲ್ಲೇ ಈ ರನ್ ವೇ ಯಲ್ಲಿರುವ ಸಮಸ್ಯೆಯ ಬಗ್ಗೆ ಡಿಜಿಸಿಎ ಎಚ್ಚರಿಕೆ ನೀಡಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚಿನ ವರದಿಯ ಪ್ರಕಾರ 40 ಕ್ಕೂ ಹೆಚ್ಚು  ಜನರು ತೀವ್ರವಾಗಿ ಗಾಯಗೊಂಡಿದ್ದು ರಕ್ಷಣಾ ಕಾರ್ಯ ಚುರುಕುಪಡೆದುಕೊಂಡಿದೆ. ಕೇರಳ ಸರ್ಕಾರ 04832719493  ಸಹಾಯವಾಣಿಯನ್ನು ಪ್ರಾರಂಭಿಸಿದೆ.
      ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಕೇರಳದ ವಿಮಾನ ದುರಂತದಲ್ಲಿ ಉಂಟಾಗಿರುವ ಸಾವು-ನೋವುಗಳಿಂದ ದುಃಖವಾಗಿದೆ ಎಂದು ಹೇಳಿದ್ದಾರೆ. 

     ರಕ್ಷಣಾ ಕಾರ್ಯಾಚರಣೆಯಲ್ಲಿ ಓರ್ವ ಪ್ರಯಾಣಿಕನನ್ನು ಹೊರತುಪಡಿಸಿ ಬದುಕಿ ಉಳಿದ ಎಲ್ಲರನ್ನೂ ವಿಮಾನದ ಅವಶೇಷಗಳಿಂದ ರಕ್ಷಣೆ ಮಾಡಲಾಗಿದೆ. ವಿಮಾನದಲ್ಲೇ ಸಿಲುಕಿರುವ ಓರ್ವ ಪ್ರಯಾಣಿಕ ಸಹ ಸುರಕ್ಷಿತವಾಗಿದ್ದಾರೆ ಎಂದು ಅಲ್ಲಿನ ಸಂಸದ ಇ.ಟಿ ಮೊಹಮ್ಮದ್ ಬಶೀರ್ ತಿಳಿಸಿದ್ದಾರೆ. ಗಾಯಾಳುಗಳನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಹಾಗೂ ಸ್ಥಳೀಯ ಆಸ್ಪತ್ರೆಗಳಿಗೆ ಸೇರಿಸಲಾಗಿದೆ.

       ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ಖಾತೆಯ ರಾಜ್ಯ ಸಚಿವ ವಿ.ಮುರಳೀಧರನ್ ಅವರೊಂದಿಗೆ ಮಾತನಾಡಿದ್ದು, ರಾಜ್ಯ ಸಚಿವರು ಶನಿವಾರ ಬೆಳಿಗ್ಗೆ ಕೋಯಿಕ್ಕೋಡ್ ಗೆ ಭೇಟಿ ನೀಡುವ ಸಾಧ್ಯತೆ ಇದೆ.

      ಘಟನೆಯ ಹಿನ್ನೆಲೆಯಲ್ಲಿ ಕೋಯಿಕ್ಕೋಡ್ ಗೆ ತೆರಳುವ ಎಲ್ಲಾ ವಿಮಾನಗಳನ್ನು ಕಣ್ಣೂರು ವಿಮಾನ ನಿಲ್ದಾಣಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries