ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.
ದೇಶದ ಹೊರಗೆ ಟೂರ್ನಿಯನ್ನು ಆಯೋಜಿಸಲು ಕೇಂದ್ರ ಸರ್ಕಾರದಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಪ್ಪಿಗೆ ಪಡೆದಿದೆ. ಈ ಕುರಿತು ಭಾನುವಾರ ನಡೆದ ಐಪಿಎಲ್ ಆಡಳಿತ ಮಂಡಳಿ ಸಭೆಯ ಬಳಿಕ ಹೊರಬಿದ್ದಿದ್ದು, ಟೂರ್ನಿಯ ಕುರಿತು ವಿಸ್ತೃತ ವಿವರಗಳನ್ನು ನೀಡಲಾಗಿದೆ.