ನವದೆಹಲಿ: ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಕೋವಿಡ್-19 ಲಸಿಕೆ ಉತ್ಪಾದನಾ ಪಾಲುದಾರಿಕೆಯನ್ನು ಹೊಂದಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ 225 ರೂ.ಗೆ ನೀಡುವುದಾಗಿ ಪ್ರಕಟಿಸಿದೆ.
ಭಾರತ ಸೇರಿದಂತೆ ಕಡಿಮೆ ಮತ್ತು ಮಧ್ಯಮ ಆದಾಯ ಹೊಂದಿರುವ ದೇಶಗಳಿಗೆ 100 ಮಿಲಿಯನ್ ಡೋಸ್ ಕೋವಿಡ್ 19 ಲಸಿಕೆಗಳನ್ನು ತಯಾರಿಸಲು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ 150 ಮಿಲಿಯನ್ ಡಾಲರ್ ಹಣವನ್ನು ಒದಗಿಸುತ್ತದೆ ಎಂದು ಸೀರಮ್ ತಿಳಿಸಿದೆ.
ಅಸ್ಟ್ರಾಜೆನೆಕಾ ಪರವಾನಗಿ ಹೊಂದಿರುವ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಲಸಿಕೆ ಅಭ್ಯರ್ಥಿಯು ಭಾರತ ಮತ್ತು ಇತರ ಹಲವಾರು ದೇಶಗಳಲ್ಲಿ ಕ್ಲಿನಿಕಲ್ ಪ್ರಯೋಗಗಳ ಮುಂದುವರಿದ ಹಂತದಲ್ಲಿದೆ ಮತ್ತು 2021ರ ಮೊದಲಾರ್ಧದಲ್ಲಿ ಸಾರ್ವಜನಿಕ ಬಳಕೆಗೆ ಲಭ್ಯವಾಗುವ ಸಾಧ್ಯತೆಯಿದೆ.
ಅಸ್ಟ್ರಾಜೆನೆಕಾ ಮತ್ತು ನೊವಾವಾಕ್ಸ್ ಲಸಿಕೆಗಳಿಗೆ 3 ಡಾಲರ್ ಬೆಲೆ ನಿಗದಿಪಡಿಸಿ ಜಗತ್ತಿನ ಸುಮಾರು 92 ದೇಶಗಳಲ್ಲಿ ಗಾವಿಯ ಕೋವಾಕ್ಸ್ ಅಡ್ವಾನ್ಸ್ ಮಾರ್ಕೆಟ್ ಕಮಿಟ್ ಮೆಂಟ್ ಕೇಂದ್ರಗಳಲ್ಲಿ ಲಭ್ಯವಾಗುವಂತೆ ಮಾಡುವ ಗುರಿ ಹೊಂದಲಾಗಿದೆ ಎನ್ನಲಾಗಿದೆ.