ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 78 ಸಾವಿರದ 761 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 35 ಲಕ್ಷ ಗಡಿ ದಾಟಿದೆ.
ನಿನ್ನೆ ಒಂದೇ ದಿನ 78,761 ಹೊಸ ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 35,42,734ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಸೋಂಕಿಗೆ 948 ಮಂದಿ ಮಹಾಮಾರಿ ವೈರಸ್ ಗೆ ಬಲಿಯಾಗಿದ್ದು, ಇದುವರೆಗೆ ದೇಶದಲ್ಲಿ ಕೊರೋನಾಗೆ ಮೃತಪಟ್ಟವರ ಸಂಖ್ಯೆ 63,498ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ 35,42,734 ಮಂದಿ ಸೋಂಕಿತರ ಪೈಕಿ 27,13,934 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಇನ್ನೂ 7,65,302 ಸಕ್ರಿಯ ಕೇಸುಗಳಿವೆ ಎಂದು ಸಚಿವಾಲಯದ ಮಾಹಿತಿ ತಿಳಿಸಿದೆ.