ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 63,489 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,89,682ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಒಂದೇ ದಿನ 944 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 49,980ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಮಾಡಿದೆ.
ಈ ನಡುವೆ 25,89,682 ಮಂದಿ ಸೋಂಕಿತರ ಪೈಕಿ 18,62,258 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 6,77,444 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಜೊತೆಗೆ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 7,46,608 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 7,46,608 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 15 ರವರೆಗೂ 2,93,09,703 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.