ಪಣಜಿ: ಕೋವಿಡ್ -19 ಪಾಸಿಟಿವ್ ಪತ್ತೆ ಬಳಿಕ ಹೋಮ್ ಐಸೋಲೇಷನ್ ನಲ್ಲಿದ್ದ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರ ಕುಟುಂಬ ಸದಸ್ಯರು ಇಂದು ತಿಳಿಸಿದ್ದಾರೆ.
67 ವರ್ಷದ ಉತ್ತರ ಗೋವಾದ ಬಿಜೆಪಿ ಸಂಸದರಾಗಿರುವ ಶ್ರೀಪಾದ್ ಯೆಸ್ಸೋ ನಾಯಕ್ ಅವರಿಗೆ ಜ್ವರ ಕಾಣಿಸಿಕೊಂಡ ನಂತರ ಅವರನ್ನು ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಈಗ ಸ್ವಲ್ಪ ಕಡಿಮೆಯಾಗಿದೆ ಎಂದು ನಾಯಕ್ ಅವರ ಹಿರಿಯ ಪುತ್ರ ಸಿದೇಶ್ ಸುದ್ದಿಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ್ದಾರೆ. ತಮ್ಮ ತಾಯಿಯನ್ನು ಕೂಡಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ ಸಿದೇಶ್ ತಿಳಿಸಿದ್ದಾರೆ.