ಉಪ್ಪಳ: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಭಾನುವಾರ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ನಗರಸಭೆಯ ಮೋಹನ್ (71) ಮತ್ತು ಉಪ್ಪಳದ ಏಳು ತಿಂಗಳ ಗಂಡು ಮಗು ಅಬ್ದುಲ್ ರಹಮಾನ್ ಮತ್ತು ಮುಮ್ತಾಜ್ ದಂಪತಿಗಳ ಪುತ್ರ ರೆಜಾ ಎಂದು ಗುರುತಿಸಲಾಗಿದೆ. ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾಯಿಗೂ ಕೋವಿಡ್ ಸೋಂಕು ಬಾಧಿಸಿದ್ದು ಚಿಕಿತ್ಸೆಯಲ್ಲಿದ್ದಾರೆ. ತೀವ್ರ ನ್ಯುಮೋನಿಯಾದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‍ನಿಂದ ಸಾವನ್ನಪ್ಪಿದವರ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ.
ಮೋಹನನ್ ಅವರನ್ನು ಎದೆನೋವಿನ ಹಿನ್ನೆಲೆಯಲ್ಲಿ ಪರಿಯಾರಂ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಎದೆ ನೋವಿನ ಕಾರಣ ಕಳೆದ ಸೋಮವಾರ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ನಡೆಸಿದ ಗಂಟಲ ದ್ರವ ಪರೀಕ್ಷೆಯಲ್ಲಿ ಕೋವಿಡ್ ದೃಢಪಡಿಸಲಾಗಿತ್ತು. ಬಳಿಕ ಅಸಹನೀಯ ನೋವಿನ ಕಾರಣ ಪರಿಯಾರಂಗೆ ಕರೆದೊಯ್ಯಲಾಗಿತ್ತು. ಕೋವಿಡ್ ನಿಬಂಧನೆಗಳ ಅನ್ವಯ ಭಾನುವಾರ ಸಂಜೆ ಅಂತ್ಯಕ್ರಿಯೆ ನಡೆಯಿತು.
ಮೋಹನ್ ಪತ್ನಿ, ಪುತ್ರ, ಮೂವರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.