ಮಾಸ್ಕೋ: ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿದೆ ಎಂದು ವರದಿಯಾಗಿದೆ.
ವಿಶ್ವದಾದ್ಯಂತ ಈವರೆಗೂ 20,001,019 ಮಂದಿ ಸೋಂಕಿನಿಂದ ಬಳಲುತ್ತಿದ್ದು, 7,33,897 ಮಂದಿಯನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದೆ.
20,001,019 ಮಂದಿ ಸೋಂಕಿತರ ಪೈಕಿ 12,200,847 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 7,800,172 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
ವಿಶ್ವದಲ್ಲಿ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕಾವೊಂದರಲ್ಲೇ 5,251,446 ಸೋಂಕಿತರಿದ್ದು, ಈವರೆಗೆ 166,192 ಮಂದಿ ಸಾವಿಗೀಡಾಗಿದ್ದಾರೆ.
ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 3,057,470 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 101,857 ಮಂದಿ ಮೃತಪಟ್ಟಿದ್ದಾರೆ. ಭಾರತದಲ್ಲಿ ಈವರೆಗೆ 2,267,153 ಜನರಿಗೆ ಕೊರೋನ ಸೋಂಕು ತಗುಲಿದ್ದು, 45,353 ಮಂದಿ ಬಲಿಯಾಗಿದ್ದಾರೆ.