ನವದೆಹಲಿ: ಭಾರತದಲ್ಲಿ ಇದೂವರೆಗೂ 2 ಕೋಟಿಗೂ ಹೆಚ್ಚು ಮಂದಿಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ತಿಳಿಸಿದೆ.
ಐಸಿಎಂಆರ್ ಮಾಹಿತಿ ನೀಡಿರುವ ಪ್ರಕಾರ ಈ ವರೆಗೂ ಅಂದರೆ ಆಗಸ್ಟ್2ರವರೆಗೂ 2,02,02,858 ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 3,81,027 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,972 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇನ್ನು ನಿನ್ನೆ ಒಂದೇ ದಿನ 771 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ ಇದರೊಂದಿಗೆ ದೇಶದಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 38,135ಕ್ಕೆ ಏರಿಕೆಯಾಗಿದೆ.
ಒಂದೇ ದಿನ 52,972 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 18,03,696 ಕ್ಕೆ ಏರಿಕೆಯಾಗಿದೆ. 18,03,696ಮಂದಿ ಸೋಂಕಿತರ ಪೈಕಿ 1,186,203 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನೂ 5,79,357 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
Number of #COVID19 tests crosses 2 crore mark in India with 2,02,02,858 tests conducted till August 2. Of these, 3,81,027 tests were conducted yesterday: Indian Council of Medical Research (ICMR)