ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 62,064 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22 ಲಕ್ಷ ಗಡಿ ದಾಟಿದೆ ಎಂದು ಸೋಮವಾರ ತಿಳಿದುಬಂದಿದೆ.
ಒಂದೇ ದಿನ ದೇಶದಾದ್ಯಂತ 62,064 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 22,15,075ಕ್ಕೆ ತಲುಪಿದೆ. ಇನ್ನು ನಿನ್ನೆ ದಾಖಲೆಯ 1,007 ಮಂದಿ ಮಹಾಮಾರಿ ವೈರಸ್ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 44,386ಕ್ಕೆ ಏರಿಕೆಯಾಗಿದೆ.
ಈ ನಡುವೆ 22,15,075 ಮಂದಿ ಸೋಂಕಿತರ ಪೈಕಿ 15,35,744 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 6,34,945 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಇದೇ ವೇಳೆ ಮಹಾರಾಷ್ಟ್ರದಲ್ಲಿ 12,822 ಕೇಸ್ 275 ಸಾವು, ತಮಿಳುನಾಡಿನಲ್ಲಿ 5,994 ಕೇಸ್, 119 ಮಂದಿ ಸಾವು, ಆಂಧ್ರಪ್ರದೇಶದಲ್ಲಿ 10,080 ಕೇಸ್ 97 ಮಂದಿ ಸಾವನ್ನಪ್ಪಿದ್ದಾರೆ. ಈ ಮಧ್ಯೆ ಶನಿವಾರ ದಾಖಲೆಯ 7,17,364 ಕೊರೋನಾ ಪರೀಕ್ಷೆಗಳನ್ನು ಮಾಡಲಾಗಿದೆ.