ಕಾಸರಗೋಡು: ಜಿಲ್ಲೆಯಲ್ಲಿ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ 14 ದಿನಗಳ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಮಾರಂಭಗಳಲ್ಲಿ ಕಾಸರಗೋಡು ಜಿಲ್ಲೆಯ ಸರಕಾರಿ ಸಿಬ್ಬಂದಿ ಭಾಗವಹಿಸುವುದಿಲ್ಲ ಎಂಬ ಪ್ರತಿಜ್ಞೆ ಕೈಗೊಳ್ಳುವಿಕೆ ಆ.6ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.
ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆನ್ ಲೈನ್ ಕೋವಿಡ್ ಕೋರ್ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.