ಬದಿಯಡ್ಕ: ಕಿಳಿಂಗಾರು ಕಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರೂ ಶಾಲಾ ವ್ಯವಸ್ಥಾಪಕರಾದ ಕೆ.ಎನ್.ಕೃಷ್ಣ ಭಟ್ ಧ್ವಜಾರೋಹಣಗೈದು ಚಾಲನೆ ನೀಡಿದರು.
ಗ್ರಾಮ ಪಂಚಾಯತ್ ಸದಸ್ಯ ಡಿ.ಶಂಕರ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಮಧುಮತಿ ಕಂಬಾರು, ಅಂಗನವಾಡಿ ಶಿಕ್ಷಕಿ ಉಷಾ, ಆಶಾ ಕಾರ್ಯಕರ್ತೆ ಪ್ರೀಜಾ, ಶಾಲಾ ಅಧ್ಯಾಪಕ ಅಧ್ಯಾಪಿಕೆಯರು ಹೆತ್ತವರು ಉಪಸ್ಥಿತರಿದ್ದರು. ಮಕ್ಕಳಿಗೆ ನಡೆಸಿದ ಓನ್ಲೈನ್ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.